ADVERTISEMENT

ತಿರುಪರನ್‌ಕುಂದ್ರಂ ವಿವಾದ: ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

​ಪ್ರಜಾವಾಣಿ ವಾರ್ತೆ
Published 28 ಜನವರಿ 2026, 15:29 IST
Last Updated 28 ಜನವರಿ 2026, 15:29 IST
   

ನವದೆಹಲಿ: ತಿರುಪರನ್‌ಕುಂದ್ರಂ ಬೆಟ್ಟದಲ್ಲಿರುವ ದೀಪ ಸ್ತಂಭದಲ್ಲಿ ದೀಪ ಹಚ್ಚಲು ಅನುಮತಿ ನೀಡಿದ ಮದ್ರಾಸ್‌ ಹೈಕೋರ್ಟ್‌ನ ನ್ಯಾಯಮೂರ್ತಿ ಜಿ.ಆರ್‌. ಸ್ವಾಮಿನಾಥನ್‌ ಅವರನ್ನು ಜಾತಿ ಮತ್ತು ಧರ್ಮದ ಆಧಾರದಲ್ಲಿ ಪ್ರತಿಭಟನಕಾರರು ನಿಂದಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಬುಧವಾರ ಸೂಚನೆ ನೀಡಿದೆ.

ಈ ಬಗ್ಗೆ ಬಿಜೆಪಿ ಮುಖಂಡ ಮತ್ತು ವಕೀಲ ಜಿ.ಎಸ್‌. ಮಣಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಅರವಿಂದ್‌ ಕುಮಾರ್‌ ಮತ್ತು ಪಸನ್ನ ಬಿ. ವರಾಳೆ ಅವರ ಪೀಠ ನಡೆಸಿತು. ತಮಿಳುನಾಡಿನ ಡಿಜಿಪಿ ಮತ್ತು ಚೆನ್ನೈನ ಪೊಲೀಸ್‌ ಕಮಿಷನರ್‌ ಮತ್ತು ಇತರರಿಗೂ ಪ್ರತಿಕ್ರಿಯೆ ನೀಡುವಂತೆ ಪೀಠ ಸೂಚಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT