ADVERTISEMENT

ದೆಹಲಿ ಹಿಂಸಾಚಾರ ಖಂಡಿಸಿ ಸಂಸತ್ ಆವರಣದಲ್ಲಿ ಟಿಎಂಸಿ, ಎಎಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2020, 5:46 IST
Last Updated 2 ಮಾರ್ಚ್ 2020, 5:46 IST
ದೆಹಲಿ ಹಿಂಸಾಚಾರ ಖಂಡಿಸಿ ಸೋಮವಾರ ಸಂಸತ್ ಭವನದ ಆವರಣದಲ್ಲಿ ಟಿಎಂಸಿ ಸದಸ್ಯರು ಬಾಯಿ ಮೇಲೆ ಬೆರಳಿಟ್ಟುಕೊಂಡು, ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದರು
ದೆಹಲಿ ಹಿಂಸಾಚಾರ ಖಂಡಿಸಿ ಸೋಮವಾರ ಸಂಸತ್ ಭವನದ ಆವರಣದಲ್ಲಿ ಟಿಎಂಸಿ ಸದಸ್ಯರು ಬಾಯಿ ಮೇಲೆ ಬೆರಳಿಟ್ಟುಕೊಂಡು, ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದರು   

ನವದೆಹಲಿ: ಈಶಾನ್ಯ ದೆಹಲಿಯಲ್ಲಿ ನಡೆದಿರುವ‌ ಹಿಂಸಾಚಾರ ಪ್ರಕರಣವನ್ನು ಖಂಡಿಸಿ ತೃಣಮೂಲ‌ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ (ಎಎಪಿ)ದ ಸದಸ್ಯರು ಸಂಸತ್ ಭವನದ ಆವರಣದಲ್ಲಿ ಇರುವ ಮಹಾತ್ಮ ಗಾಂಧಿ ಪ್ರತಿಮೆಯ ಎದುರು‌ ಸೋಮವಾರ ಪ್ರತಿಭಟನೆ ನಡೆಸಿದರು.

ಪಶ್ಚಿಮ ಬಂಗಾಳದಲ್ಲಿ ಭಾನುವಾರ ನಡೆದ ಕೇಂದ್ರದ ಗೃಹ ಸಚಿವ ಅಮಿತ್ ಶಾ ಸಭೆಯಲ್ಲಿ ಕೆಲವರು ‘ಗೋಲಿ ಮಾರೊ’ ಘೋಷಣೆ ಕೂಗಿದ್ದರ ಬಗ್ಗೆ ತನಿಖೆ ನಡೆಸುವಂತೆ ಟಿಎಂಸಿ ಹಿರಿಯ ಸದಸ್ಯ ಸೌಗತ್ ರಾಯ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಆಗ್ರಹಿಸಲಾಯಿತು.

ಈಶಾನ್ಯ ದೆಹಲಿಯಲ್ಲಿ ನಡೆದಿರುವ ಹಿಂಸಾಚಾರದ ಕುರಿತು ಸಮಗ್ರ ತನಿಖೆಗೆ ಎಎಪಿ ಸದಸ್ಯರು ಕೋರಿದರು.

ADVERTISEMENT

ಬಜೆಟ್‌ನ ಎರಡನೇ ಹಂತದ ಅಧಿವೇಶನ 11 ಗಂಟೆಗೆ ಆರಂಭವಾಗಲಿದ್ದು, ಸಂಸತ್‌ನ ಉಭಯ ಸದನಗಳಲ್ಲಿ ವಿಪಕ್ಷಗಳು ದೆಹಲಿ ಬೆಳವಣಿಗೆಯ ಕುರಿತು ಧರಣಿ ನಡೆಸಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.