ADVERTISEMENT

ರಾಜ್ಯಸಭೆಗೆ ಟಿಎಂಸಿಯ ಅರ್ಪಿತಾ ಘೋಷ್‌ ರಾಜೀನಾಮೆ

ಪಿಟಿಐ
Published 15 ಸೆಪ್ಟೆಂಬರ್ 2021, 21:06 IST
Last Updated 15 ಸೆಪ್ಟೆಂಬರ್ 2021, 21:06 IST

ನವದೆಹಲಿ: ಟಿಎಂಸಿ ಸಂಸದೆ ಅರ್ಪಿತಾ ಘೋಷ್‌ ಅವರು ರಾಜ್ಯಸಭೆಗೆ ರಾಜೀನಾಮೆ ನೀಡಿದ್ದಾರೆ.

ಅರ್ಪಿತಾ ಅವರ ರಾಜೀನಾಮೆಯನ್ನು ರಾಜ್ಯಸಭೆಯ ಸಭಾಪತಿ ಮತ್ತು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಅಂಗೀಕರಿಸಿದ್ದಾರೆ ಎಂದು ರಾಜ್ಯಸಭೆಯ ಸಚಿವಾಲಯ ಬುಧವಾರ ತಿಳಿಸಿದೆ.

ಅರ್ಪಿತಾ ಅವರು ರಾಜೀನಾಮೆ ನೀಡಿರುವುದು ಟಿಎಂಸಿ ಮುಖಂಡರಿಗೂ ಅಚ್ಚರಿ ಮೂಡಿಸಿದೆ. ಅರ್ಪಿತಾ ಅವರ ಕಾರ್ಯವೈಖರಿ ಬಗ್ಗೆ ಪಕ್ಷಕ್ಕೆ ತೃಪ್ತಿ ಇರಲಿಲ್ಲ. ಹೀಗಾಗಿ, ರಾಜೀನಾಮೆ ನೀಡುವಂತೆ ಸೂಚಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ADVERTISEMENT

2019ರ ಲೋಕಸಭೆ ಚುನಾವಣೆಯಲ್ಲಿ ಬಲುರ್ಘಾಟ್‌ ಕ್ಷೇತ್ರದಲ್ಲಿ ಸೋಲು ಅನುಭವಿಸಿದ ಬಳಿಕ, ಅರ್ಪಿತಾ ಅವರನ್ನು 2020ರ ಮಾರ್ಚ್‌ನಲ್ಲಿ ರಾಜ್ಯಸಭೆಗೆ ಪಶ್ಚಿಮ ಬಂಗಾಳದಿಂದ ಟಿಎಂಸಿ ನಾಮನಿರ್ದೇಶನ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.