ADVERTISEMENT

ಟಿಎಂಸಿ, ಕಾಂಗ್ರೆಸ್, ಸಿಪಿಎಂನ 107 ಶಾಸಕರು ಬಿಜೆಪಿ ಸೇರಲಿದ್ದಾರೆ: ಮುಕುಲ್ ರಾಯ್‌

​ಪ್ರಜಾವಾಣಿ ವಾರ್ತೆ
Published 13 ಜುಲೈ 2019, 11:44 IST
Last Updated 13 ಜುಲೈ 2019, 11:44 IST
   

ಕೋಲ್ಕತ್ತ: ಪಶ್ಚಿಮ ಬಂಗಾಳದ 107 ಶಾಸಕರು ಭಾರತೀಯ ಜನತಾ ಪಕ್ಷವನ್ನು ಸೇರಲಿದ್ದಾರೆ ಎಂದು ಬಿಜೆಪಿಯ ಹಿರಿಯ ಮುಖಂಡ ಮುಕುಲ್‌ ರಾಯ್‌ ತಿಳಿಸಿದ್ದಾರೆ.

ತೃಣಮೂಲ ಕಾಂಗ್ರೆಸ್‌, ಕಾಂಗ್ರೆಸ್‌ ಮತ್ತು ಸಿಪಿಐ(ಎಂ) ಪಕ್ಷಗಳ ಹಲವು ಶಾಸಕರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಬಿಜೆಪಿ ಸೇರುವ ಶಾಸಕರಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದ್ದು ಇನ್ನುಕೆಲವೇ ದಿನಗಳಲ್ಲಿ 107 ಶಾಸಕರು ಬಿಜೆಪಿ ಸೇರಲಿದ್ದಾರೆ ಎಂದು ಎಎನ್‌ಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.