ಚುನಾವಣಾ ಆಯೋಗವನ್ನು ಭೇಟಿ ಮಾಡಿದ ಟಿಎಂಸಿ ನಿಯೋಗ
–ಪಿಟಿಐ ಚಿತ್ರ
ದೆಹಲಿ: ವಿಧಾನಸಭೆ ಚುನಾವಣೆಗೂ ಮುನ್ನ ನಕಲಿ ಮತದಾರ ಸಂಖ್ಯೆ ಹೆಚ್ಚುತ್ತಿದ್ದು ಈ ಬಗ್ಗೆ ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದೇವೆ ಎಂದು ಪಶ್ಚಿಮ ಬಂಗಾಳ ಸಚಿವ ಫಿರ್ಹಾದ್ ಹಕೀಮ್ ಹೇಳಿದ್ದಾರೆ.
ಇಲ್ಲಿರುವ ಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
‘ಇಂದು ಕಲ್ಯಾಣ್ ಬ್ಯಾನರ್ಜಿ ನೇತೃತ್ವದಲ್ಲಿ ಅರೂಪ್ ಬಿಸ್ವಾಸ್, ಚಂದ್ರಿಮಾ ಭಟ್ಟಾಚಾರ್ಯ ಹಾಗೂ ನಾನು ಚುನಾವಣಾ ಆಯೋಗಕ್ಕೆ ಭೇಟಿ ನೀಡಿದೆವು. ನಮ್ಮ ನಾಯಕಿ ಮಮತಾ ಬ್ಯಾನರ್ಜಿ ಅವರಿಗೆ ಚುನಾವಣಾ ಆಯೋಗದ ಬಗ್ಗೆ ಗೌರವವಿದೆ. ಇದನ್ನು ನಾವು ಚುನಾವಣಾ ಆಯೋಗಕ್ಕೂ ತಿಳಿಸಿದ್ದೇವೆ’ ಎಂದು ಹೇಳಿದ್ದಾರೆ.
ದೆಹಲಿ ಹಾಗೂ ಮಹಾರಾಷ್ಟ್ರದ ಹಾಗೆ ಚುನಾವಣೆಗೆ ಮುಂಚಿತವಾಗಿ ನಕಲಿ ಮತದಾರರ ಸಂಖ್ಯೆ ಹೆಚ್ಚಳದ ಬಗ್ಗೆ ವಿಶೇಷವಾಗಿ ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದೇವೆ. ಹೀಗೆ ನಡೆಯುತ್ತಿರುವುದು ತಪ್ಪು. ನಾವು ಇದರ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದೇವೆ. ಅವರು ಕ್ರಮ ತೆಗೆದುಕೊಳ್ಳುವ ವಿಶ್ವಾಸ ಇದೆ’ ಎಂದು ಹೇಳಿದ್ದಾರೆ.
‘ಕೆಲವೊಮ್ಮೆ ಕೇಂದ್ರ ಪಡೆಗಳು ಮತಗಟ್ಟೆಗೆ ಪ್ರವೇಶ ಮಾಡಿ ಮತದಾರರ ಮೇಲೆ ಪ್ರಭಾವ ಬೀರಲು ಯತ್ನಿಸುತ್ತಾರೆ. ನಮ್ಮ ಆತಂಕಗಳನ್ನು ಪರಿಹರಿಸುವ ಭರವಸೆ ನೀಡಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.