
ನಿತಿನ್ ನಬೀನ್
ದುರ್ಗಾಪುರ: ‘ಪಶ್ಚಿಮ ಬಂಗಾಳವನ್ನು ಬಾಂಗ್ಲಾದೇಶ ಮಾಡಲು ಟಿಎಂಸಿ ಯತ್ನಿಸುತ್ತಿದೆ. ಒಳನುಸುಳುಕೋರರನ್ನು ಪೋಷಿಸಲಾಗುತ್ತಿದೆ. ಇದು ದೇಶದ ಭದ್ರತೆ ಗಂಭೀರ ಬೆದರಿಕೆಯಾಗಿದೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅಭಿಪ್ರಾಯಪಟ್ಟರು.
ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನಿತಿನ್ ಅವರು ಇದೇ ಮೊದಲ ಬಾರಿಗೆ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದರು. ದುರ್ಗಾಪುರದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ, ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿಯನ್ನು ಸೋಲಿಸಬೇಕು’ ಎಂದು ಅವರು ಮತದಾರರಿಗೆ ಕರೆ ನೀಡಿದರು.
‘ನಕಲಿ ಮತದಾರರನ್ನು, ಒಳನುಸುಳುಕೋರರನ್ನು ಮತದಾರರ ಪಟ್ಟಿಯಿಂದ ಅಳಿಸಲು ಚುನಾವಣಾ ಆಯೋಗ ಶ್ರಮಿಸುತ್ತಿದೆ. ಆದರೆ, ಸುಳ್ಳು ಸುದ್ದಿ ಹಬ್ಬಿಸುವುದರ ಮೂಲಕ ಟಿಎಂಸಿ ಸರ್ಕಾರವು ಎಸ್‌ಐಆರ್ ಪ್ರಕ್ರಿಯೆಯನ್ನು ಹಳಿತಪ್ಪಿಸಲು ಯತ್ನಿಸುತ್ತಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.