ADVERTISEMENT

ದೆಹಲಿಯಲ್ಲಿ ಇ.ಡಿ ಅಧಿಕಾರಿಗಳಿಂದ ಟಿಎಂಸಿ ನಾಯಕ ಅನುಬ್ರತಾ ವಿಚಾರಣೆ

ಪಿಟಿಐ
Published 7 ಮಾರ್ಚ್ 2023, 13:17 IST
Last Updated 7 ಮಾರ್ಚ್ 2023, 13:17 IST
ಜಾರಿ ನಿರ್ದೇಶನಾಲಯ
ಜಾರಿ ನಿರ್ದೇಶನಾಲಯ   

ಕೋಲ್ಕತ್ತ: ಜಾನುವಾರು ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ನಾಯಕ ಅನುಬ್ರತಾ ಮೊಂಡಲ್‌ ಅವರು ದೆಹಲಿಗೆ ಪ್ರಯಾಣ ಬೆಳೆಸಲು ಆರೋಗ್ಯವಾಗಿದ್ದಾರೆ ಎಂದು ಇಎಸ್ಐ ವೈದ್ಯರು ಹೇಳಿದ್ದಾರೆ.

ಅನಾರೋಗ್ಯದ ಕಾರಣ ವೈದ್ಯಕೀಯ ತಪಾಸಣೆಗಾಗಿ ಇಲ್ಲಿನ ಇಎಸ್‌ಐ ಆಸ್ಪತ್ರೆಗೆ ಅನುಬ್ರತಾ ಮೊಂಡಲ್‌ ದಾಖಲಾಗಿದ್ದರು. ಅವರು ಆರೋಗ್ಯವಾಗಿದ್ದು ದೆಹಲಿಗೆ ಪ್ರಯಾಣಿಸಬಹುದು ಎಂದು ವೈದ್ಯರು ತಿಳಿಸಿದ ಬಳಿಕ ಇ.ಡಿ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದರು. ದೆಹಲಿಯಲ್ಲಿ ವಿಚಾರಣೆ ನಡೆಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಲ್ಲಿಂದ ಮೊಂಡಲ್‌ ಅವರನ್ನು ದೆಹಲಿಗೆ ವಿಮಾನದ ಮೂಲಕ ಕರೆದೊಯ್ಯಲಾಗುವುದು. ನಾಲ್ವರು ಇ.ಡಿ ಅಧಿಕಾರಿಗಳು ಒಬ್ಬ ವೈದ್ಯರು ಅವರ ಜೊತೆ ಪ್ರಯಾಣಿಸಲಿದ್ದಾರೆ ಎಂದು ಇ.ಡಿ ಅಧಿಕಾರಿಗಳು ಹೇಳಿದ್ದಾರೆ.

ADVERTISEMENT

ಮೊಂಡಲ್‌ ಅವರನ್ನು ಕಳೆದ ವರ್ಷ ನವೆಂಬರ್‌ನಲ್ಲಿ ಇ.ಡಿ ಬಂಧಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.