ಟಿಎಂಸಿ
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ 2021ರಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಬಿಜೆಪಿ ನಾಯಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ಶಾಸಕ ಪರೇಶ್ ಪೌಲ್ ಮತ್ತು ನಗರ ಪಾಲಿಕೆ ಸದಸ್ಯರಾದ ಸಮದ್ದರ್ ಮತ್ತು ಪಪಿಯಾ ಘೋಷ್ ಅವರ ವಿರುದ್ಧ ಸಿಬಿಐ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಿದೆ.
ಪ್ರಕರಣಕ್ಕೆ ಸಂಬಂಧಿಸಿ ಎರಡನೇ ಹೆಚ್ಚುವರಿ ದೋಷಾರೋಪ ಪಟ್ಟಿಯನ್ನು ಹೆಚ್ಚುವರಿ ಮುಖ್ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಿಬಿಐ ಸಲ್ಲಿಸಿದ್ದು, ಒಟ್ಟು 18 ಮಂದಿಯ ಹೆಸರನ್ನು ಉಲ್ಲೇಖಿಸಿದೆ.
ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶ ಘೋಷಣೆಯಾದ ಬಳಿಕ 2021 ಮೇ 2ರಂದು ಕಂಕುರಗಚಿ ಪ್ರದೇಶದಲ್ಲಿ ಬಿಜೆಪಿ ನಾಯಕ ಅವಿಜಿತ್ ಸರ್ಕಾರ್ ಅವರ ಹತ್ಯೆ ನಡೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.