ADVERTISEMENT

ಕೋಲ್ಕತ್ತ: ಟಿಎಂಸಿ ಸಂಸದೆ ನುಸ್ರತ್ ಜಹಾನ್ ಇ.ಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರು

ಪಿಟಿಐ
Published 12 ಸೆಪ್ಟೆಂಬರ್ 2023, 7:16 IST
Last Updated 12 ಸೆಪ್ಟೆಂಬರ್ 2023, 7:16 IST
Venugopala K.
   Venugopala K.

ಕೋಲ್ಕತ್ತ: ಹಿರಿಯ ನಾಗರಿಕರಿಗೆ ಫ್ಲ್ಯಾಟ್ ನೀಡುವುದಾಗಿ ನಂಬಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ, ನಟಿ ನುಸ್ರತ್ ಜಹಾನ್ ಅವರು ಕೋಲ್ಕತ್ತದ ಇ.ಡಿ. ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.

ಇಂದು ಸಂಸದಯ ಹೇಳಿಕೆ ದಾಖಲಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.

‘ಹಿರಿಯ ನಾಗರಿಕರಿಗೆ ಫ್ಲ್ಯಾಟ್ ನೀಡುವುದಾಗಿ ವಂಚಿಸಿದ ಕಂಪನಿಯಲ್ಲಿ ಅವರ ಪಾತ್ರದ ಕುರಿತಂತೆ ವಿಚಾರಣೆ ನಡೆಸಲಾಗುವುದು. ಈಗಾಗಲೇ ಹಲವು ಪ್ರಶ್ನೆಗಳನ್ನು ಪಟ್ಟಿ ಮಾಡಿಕೊಂಡಿದ್ದೇವೆ. ಈ ಸಂಪೂರ್ಣ ಪ್ರಕ್ರಿಯೆ ಮತ್ತು ಅವರ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲಾಗುವುದು’ ಎಂದೂ ಅಧಿಕಾರಿ ಹೇಳಿದ್ದಾರೆ.

ADVERTISEMENT

ಉಪನಗರ ಪ್ರದೇಶದಲ್ಲಿ ತಮಗೆ ಫ್ಲ್ಯಾಟ್ ನೀಡುವುದಾಗಿ ಭರವಸೆ ನೀಡಿ ವಂಚಿಸಲಾಗಿದೆ ಎಂದು ಆರೋಪಿಸಿ ಹಿರಿಯ ನಾಗರಿಕರು ದೂರು ದಾಖಲಿಸಿದ್ದರು. ಈ ಸಂಬಂಧ ಇ.ಡಿ ತನಿಖೆ ನಡೆಸುತ್ತಿದ್ದು, ನುಸ್ರತ್ ಜಹಾನ್‌ಗೆ ಸಮನ್ಸ್ ಜಾರಿ ಮಾಡಿತ್ತು..

ಈ ಕುರಿತಂತೆ ಪತ್ರಿಕಾಗೋಷ್ಠಿ ನಡೆಸಿದ್ದ ಸಂಸದೆ ಜಹಾನ್ ತಮ್ಮ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದ್ದರು. ವಂಚನೆಯ ಆರೋಪ ಕೇಳಿಬಂದಿರುವ ಕಂಪನಿಯ ನಿರ್ದೇಶಕಿ ಸ್ಥಾನಕ್ಕೆ ಮಾರ್ಚ್ 2017ರಲ್ಲೇ ರಾಜೀನಾಮೆ ನೀಡಿರುವುದಾಗಿ ಅವರು ಹೇಳಿದ್ದರು. ಆ ಕಂಪನಿಯಿಂದ ಸಾಲ ಪಡೆದಿದ್ದು ನಿಜ. ಆದರೆ, ಮೇ 2017ರಲ್ಲೇ ಅದನ್ನು ಮರುಪಾವತಿಸಿದ್ದೇನೆ ಎಂದೂ ಅವರು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.