ADVERTISEMENT

ಇ.ಡಿ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ ಮೇನಕಾ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2022, 14:23 IST
Last Updated 12 ಸೆಪ್ಟೆಂಬರ್ 2022, 14:23 IST
   

ಕೋಲ್ಕತ್ತ:ಜಾರಿ ನಿರ್ದೇಶನಾಲಯದ ಆದೇಶದಲ್ಲಿ ನಿರ್ಬಂಧ ಹೇರದಿದ್ದರೂ ಭಾರತದ ಹೊರಗೆ ಪ್ರಯಾಣಿಸುವುದನ್ನು ತಡೆಯಲಾಗಿದೆ ಎಂದುಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಸಂಬಂಧಿ ಮೇನಕಾ ಗಂಭೀರ್ ಅವರು ಸೋಮವಾರ ಕೋಲ್ಕತ್ತ ಹೈಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.

ನ್ಯಾಯಮೂರ್ತಿ ಮೌಶುಮಿ ಭಟ್ಟಾಚಾರ್ಯ ಅವರು ಅರ್ಜಿಯನ್ನು ಈ ವಾರದ ಕೊನೆಯಲ್ಲಿ ವಿಚಾರಣೆಗೆ ತೆಗೆದುಕೊಳ್ಳುವ ನಿರೀಕ್ಷೆಯಿದೆ.

ಇ.ಡಿ ನಿರ್ದೇಶನದ ಮೇರೆಗೆ ಶನಿವಾರ ಸಂಜೆ ಎನ್‌ಎಸ್‌ಸಿ ಬೋಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶ ಪ್ರಯಾಣಕ್ಕೆ ತಡೆಹಿಡಿಯಲಾಗಿದೆ ಎಂದು ಗಂಭೀರ್ ಅವರು ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ಹೇಳಿದ್ದಾರೆ.

ADVERTISEMENT

ನ್ಯಾಯಮೂರ್ತಿ ಭಟ್ಟಾಚಾರ್ಯ ಅವರು ಆ. 30ರಂದು ಟಿಎಂಸಿ ಸಂಸದ ಅಭಿಷೇಕ್ ಪತ್ನಿಯ ಸಹೋದರಿ ಗಂಭೀರ್ ಅವರನ್ನು ಕೋಲ್ಕತ್ತದ ಪ್ರಾದೇಶಿಕ ಕಚೇರಿಯಲ್ಲಿ ಪ್ರಶ್ನಿಸುವಂತೆ ಮತ್ತು ಮುಂದಿನ ವಿಚಾರಣೆಯ ದಿನಾಂಕದವರೆಗೆ ಅವರ ವಿರುದ್ಧ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳದಂತೆ ಕೇಂದ್ರ ಸಂಸ್ಥೆಗೆ ನಿರ್ದೇಶನ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.