ADVERTISEMENT

ರಾಜ್ಯಸಭೆ: ಪಶ್ಚಿಮ ಬಂಗಾಳಕ್ಕೆ ಬಾಂಗ್ಲಾ ಎಂದು ಮರುನಾಮಕರಣ ಮಾಡಲು ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳಕ್ಕೆ ‘ಬಾಂಗ್ಲಾ’ (Bangla) ಎಂದು ಮರುನಾಮಕರಣ ಮಾಡಲು ತೃಣಮೂಲ ಕಾಂಗ್ರೆಸ್ ಮತ್ತೊಮ್ಮೆ ಬೇಡಿಕೆ ಮಂಡಿಸಿದೆ.

ಪಿಟಿಐ
Published 4 ಫೆಬ್ರುವರಿ 2025, 10:39 IST
Last Updated 4 ಫೆಬ್ರುವರಿ 2025, 10:39 IST
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ –ಪಿಟಿಐ ಚಿತ್ರ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ –ಪಿಟಿಐ ಚಿತ್ರ   

ನವದೆಹಲಿ: ಪಶ್ಚಿಮ ಬಂಗಾಳಕ್ಕೆ ‘ಬಾಂಗ್ಲಾ’ (Bangla) ಎಂದು ಮರುನಾಮಕರಣ ಮಾಡಲು ತೃಣಮೂಲ ಕಾಂಗ್ರೆಸ್ ಮತ್ತೊಮ್ಮೆ ಬೇಡಿಕೆ ಮಂಡಿಸಿದೆ.

ರಾಜ್ಯಸಭೆಯ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಟಿಎಂಸಿ ಸಂಸದ ರಿತಭ್ರತ್ ಬ್ಯಾನರ್ಜಿ ಅವರು, 2018ರಲ್ಲೇ ಪಶ್ಚಿಮ ಬಂಗಾಳ ವಿಧಾನಸಭೆ ರಾಜ್ಯಕ್ಕೆ ಮರುನಾಮಕರಣ ಬೇಡಿಕೆಯನ್ನು ಎತ್ತಿ ಹಿಡಿದಿದೆ. ಅದರೆ, ಇದಕ್ಕೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.

ಪಶ್ಚಿಮ ಬಂಗಾಳಕ್ಕೆ ಬಾಂಗ್ಲಾ ಎಂದು ನಾಮಕರಣವಾದರೆ ಇತಿಹಾಸ ಹಾಗೂ ಸಂಸ್ಕೃತಿಯನ್ನು ಅದು ಎತ್ತಿ ಹಿಡಿಯುತ್ತದೆ ಎಂದು ಬ್ಯಾನರ್ಜಿ ಪ್ರತಿಪಾದಿಸಿದ್ದಾರೆ.

ADVERTISEMENT

ಈ ಕುರಿತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಆದರೂ ಪ್ರಯೋಜನವಾಗಿಲ್ಲ ಎಂದು ಅವರು ಆರೋಪಿಸಿದ್ದಾರೆ.

1947ರ ದೇಶ ವಿಭಜನೆ ನಂತರ ಪಾಕಿಸ್ತಾನ ಮತ್ತು ಪೂರ್ವ ಪಾಕಿಸ್ತಾನ ಎಂದು ಎರಡು ದೇಶಗಳಾದವು. 1971ರಲ್ಲಿ ಪೂರ್ವ ಪಾಕಿಸ್ತಾನ ಸ್ವಾತಂತ್ರ್ಯ ಘೋಷಿಸಿಕೊಂಡು ಬಾಂಗ್ಲಾದೇಶ ಎಂದಾಯಿತು. ಆದರೆ, ಸ್ವಾತಂತ್ರ್ಯಪೂರ್ವದಲ್ಲಿ ಬಂಗಾಳ ಎಂದು ಕರೆಯಲ್ಪಡುತ್ತಿದ್ದ ಪ್ರದೇಶ ಪಶ್ಚಿಮ ಬಂಗಾಳವಾಗಿಯೇ ಉಳಿಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.