ಅಭಿಷೇಕ್ ಬ್ಯಾನರ್ಜಿ
ನವದೆಹಲಿ: ‘ಇಂಡಿಯಾ’ ಒಕ್ಕೂಟದ ನಾಯಕರ ಸಭೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಭಾಗವಹಿಸಲಿದ್ದಾರೆ ಎಂದು ಪಕ್ಷ ಶುಕ್ರವಾರ ತಿಳಿಸಿದೆ.
ಲೋಕಸಭೆ ಚುನಾವಣೆ ನಡೆದ ಬಳಿಕ ಇದೇ ಮೊದಲ ಬಾರಿಗೆ ‘ಇಂಡಿಯಾ’ ಒಕ್ಕೂಟದ ನಾಯಕರ ಸಭೆಯು ಜುಲೈ 19ರಂದು ಸಂಜೆ ನಡೆಯಲಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಸಭೆ ಆಯೋಜಿಸಲಾಗಿದೆ. ಕಳೆದ ವರ್ಷ ಜೂನ್ 1ರ ಬಳಿಕ ನಡೆಯುತ್ತಿರುವ ಮೊದಲ ‘ಇಂಡಿಯಾ’ ಒಕ್ಕೂಟದ ಸಭೆ ಇದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.