ನವದೆಹಲಿ: ತಮ್ಮನ್ನು ಬಂಧಿಸುವಂತೆ ಮದ್ರಾಸ್ ಹೈಕೋರ್ಟ್ ಪೊಲೀಸರಿಗೆ ನೀಡಿದ ನಿರ್ದೇಶನದ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ತಮಿಳುನಾಡಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಚ್.ಎಂ. ಜಯರಾಮ್ ಅವರು ಮಂಗಳವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದರು.
ಬಾಲಕನೊಬ್ಬನ ಅಪಹರಣಕ್ಕೆ ಸಹಕಾರ ನೀಡಿದ ಆರೋಪದಲ್ಲಿ ಅವರನ್ನು ಬಂಧಿಸಲು ಮದ್ರಾಸ್ ಹೈಕೋರ್ಟ್ ನಿರ್ದೇಶನ ನೀಡಿತ್ತು. ಅರ್ಜಿಯ ವಿಚಾರಣೆಯನ್ನು ಬುಧವಾರ ನಡೆಸುವುದಾಗಿ ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್ ಮತ್ತು ಮನ್‌ಮೋಹನ್ ಅವರಿದ್ದ ಪೀಠ ಹೇಳಿತು.
‘ಪ್ರಕರಣ ಸಂಬಂಧ ಬಂಧಿಸಲಾಗಿದ್ದ ಆರೋಪಿಗಳ ತಪ್ಪೊಪ್ಪಿಗೆ ಹೇಳಿಕೆ ಆಧಾರದಲ್ಲಿ ಜಯರಾಮ್ ಅವರ ಬಂಧನಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ತಕ್ಷಣವೇ ಅರ್ಜಿಯ ವಿಚಾರಣೆ ನಡೆಸಬೇಕು’ ಎಂದು ಎಡಿಜಿಪಿ ಪರ ವಕೀಲರು ವಾದಿಸಿದರು.
ಜಯರಾಮ್ ಅವರನ್ನು ಮಂಗಳವಾರ ಸೇವೆಯಿಂದ ಅಮಾನತು ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.