ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್
ಚೆನ್ನೈ: ಫೆಂಜಲ್ ಚಂಡಮಾರುತದಿಂದ ಸಂತ್ರಸ್ತರಾದ ಕುಟುಂಬಗಳಿಗೆ ತಲಾ ₹2 ಸಾವಿರ ಪರಿಹಾರ ನೀಡಲಾಗುವುದು ಎಂದು ತಮಿಳುನಾಡು ಮುಖ್ಯಸ್ಥ ಎಂ.ಕೆ ಸ್ಟಾಲಿನ್ ಮಂಗಳವಾರ ಘೋಷಿಸಿದ್ದಾರೆ.
ರಾಜ್ಯದಾದ್ಯಂತ ಸುರಿದ ಮಳೆಯಿಂದ ಉಂಟಾದ ಹಾನಿ ಬಗ್ಗೆ ಚರ್ಚಿಸಲು ಇಲ್ಲಿನ ಸೆಕ್ರೆಟರಿಯೇಟ್‌ನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಾನಿಗೊಳಗಾದ ವಿಲ್ಲುಪುರಂ, ಕಡಲೂರು ಮತ್ತು ಕಲ್ಲಕುರಿಚಿ ಜಿಲ್ಲೆಗಳ ಕುಟುಂಬಗಳಿಗೆ ಪಡಿತರ ಚೀಟಿಯ ಆಧಾರದ ಮೇಲೆ ₹2 ಸಾವಿರ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕಳೆದ 2 ದಿನಗಳಿಂದ ರಾಜ್ಯದ ವಿಲ್ಲುಪುರಂ, ಕಡಲೂರು ಮತ್ತು ಕಲ್ಲಕುರಿಚಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಚಂಡಮಾರುತ ಹಾಗೂ ಪ್ರವಾಹದಿಂದ ತಮ್ಮ ಸಂಬಂಧಿಕರನ್ನು ಕಳೆದುಕೊಂಡ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.
ಹಾನಿಗೊಳಗಾದ ಮನೆಗಳಿಗೆ ₹10 ಸಾವಿರ ಪರಿಹಾರ, ಮನೆ ಸಂಪೂರ್ಣ ಹಾನಿಗೊಳಗಾಗಿದ್ದರೆ ವಸತಿ ಯೋಜನೆ ಅಡಿಯಲ್ಲಿ ಮನೆಗಳನ್ನು ನಿರ್ಮಿಸಲು ಸರ್ಕಾರ ನಿರ್ಧರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.