
ಚೆನ್ನೈ: 2026ರಲ್ಲಿ ನಡೆಯುವ ತಮಿಳುನಾಡು ವಿಧಾನಸಭೆ ಚುನಾವಣೆಗೆ ಸೀಟು ಹಂಚಿಕೆ ಸಂಬಂಧ ಡಿಎಂಕೆ ಜತೆ ಚರ್ಚಿಸಲು ಐವರು ಸದಸ್ಯರ ಸಮಿತಿಯನ್ನು ಮಲ್ಲಿಕಾರ್ಜುನ ಖರ್ಗೆ ರಚಿಸಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೆ. ಸೆಲ್ವಪೆರುಂತಗೈ ಅವರು ಶನಿವಾರ ತಿಳಿಸಿದ್ದಾರೆ.
ಪಕ್ಷದ ತಮಿಳುನಾಡು ಹಾಗೂ ಪುದುಚೇರಿ ಉಸ್ತುವಾರಿ ಗಿರೀಶ್ ಚೊಂದಂಕರ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಮಿತ್ರಪಕ್ಷ ಆಡಳಿತರೂಢ ಡಿಎಂಕೆಯೊಂದಿಗೆ ಮಾತುಕತೆ ನಡೆಸುವ ಹೊಣೆಗಾರಿಕೆ ವಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಸೆಲ್ವಪೆರುಂತಗೈ, ಶಾಸಕಾಂಗ ಪಕ್ಷದ ನಾಯಕ ಎಸ್. ರಾಜೇಶ್ ಕುಮಾರ್ ಅವರೂ ಸಮಿತಿಯ ಭಾಗವಾಗಿದ್ದಾರೆ.
ಸಮಿತಿ ನೇಮಕವನ್ನು ಶ್ಲಾಘಿಸಿರುವ ಕಾಂಗ್ರೆಸ್‌ನ ಹಿರಿಯ ಮುಖಂಡ ಪಿ. ಚಿದಂಬರಂ, ಈ ನಡೆಯು ಇಂಡಿಯಾ ಒಕ್ಕೂಟದ ಐಕ್ಯತೆಯನ್ನು ಬಲಪಡಿಸಲಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.