ಮಾಣಿಕ್ಕಂ ಟಾಗೋರ್
ಚೆನ್ನೈ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಸೋತ ಸ್ಥಾನಗಳನಷ್ಟೆ ನಾವು ಕೇಳುತ್ತಿದ್ದೇವೆ ಎಂದು ಕಾಂಗ್ರೆಸ್ ಸಂಸದ ಮಾಣಿಕ್ಕಂ ಟಾಗೋರ್ ಶನಿವಾರ ಹೇಳಿದ್ದಾರೆ.
2021ರ ಚುನಾವಣೆಯಲ್ಲಿ ನೀವು 173 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 133 ಸ್ಥಾನಗಳನ್ನು ಗೆದ್ದಿದ್ದೀರಿ. ನೀವು ಗೆಲ್ಲದ ಕ್ಷೇತ್ರಗಳನ್ನಷ್ಟೇ ನಾವು ಕೇಳುತ್ತಿದ್ದೇವೆ ಎಂದು ಸಂಸದ ಟಾಗೋರ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮುಂಬರುವ ಚುನಾವಣೆಯಲ್ಲಿ ಡಿಎಂಕೆ 170 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 160 ಸ್ಥಾನಗಳನ್ನು ಗೆಲ್ಲಲಿದೆ ಎಂದು ಡಿಎಂಕೆ ನಾಯಕ ಆರ್.ಎಸ್. ರಾಜಾ ಕಣ್ಣಪ್ಪನ್ ನಿನ್ನೆ ಮದುರೈನಲ್ಲಿ ಹೇಳಿದ್ದರು. ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಅದರಲ್ಲಿ ಅವರು ಮೈತ್ರಿ ಸರ್ಕಾರವನ್ನು ತಳ್ಳಿ ಹಾಕಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಸಂಸದ ಟಾಗೋರ್, ನೀವು ಸೋತ ಸ್ಥಾನಗಳನ್ನು ಮಾತ್ರ ನಾವು ಕೇಳುತ್ತಿದ್ದೇವೆ ಹಾಗೂ ಅಧಿಕಾರ ಹಂಚಿಕೆ ಅತ್ಯಗತ್ಯವಾಗಿದೆ ಎಂದು ಸ್ಪಷ್ಟಪಡಿಸಿದರು. ಅಧಿಕಾರದಲ್ಲಿ ಪಾಲು ಕೇಳುವುದು ನಮ್ಮ ಹಕ್ಕು, ಇದು ಜನರ ತೀರ್ಮಾನ ಎಂದು ಟಾಗೋರ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.