ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020 ಮತ್ತು ‘ಪಿಎಂಶ್ರೀ’ ಯೋಜನೆ ಅನುಷ್ಠಾನ ಮಾಡದ ಕಾರಣಕ್ಕೆ ಸಮಗ್ರ ಶಿಕ್ಷಣ ಯೋಜನೆಯಡಿ (ಎಸ್‌ಎಸ್‌ಎಸ್) ಅನುದಾನ ತಡೆಹಿಡಿದಿರುವ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.
ಕೇಂದ್ರ ಸರ್ಕಾರವು ₹2,151.59 ಕೋಟಿ ಮೂಲ ಮೊತ್ತ ಬಿಡುಗಡೆ ಮಾಡಬೇಕಿದ್ದು, ಅದಕ್ಕೆ ಶೇ 6ರ ಬಡ್ಡಿಯೊಂದಿಗೆ ₹2,291.30 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ನಿರ್ದೇಶಿಸಲು ಅರ್ಜಿಯಲ್ಲಿ ಕೋರಲಾಗಿದೆ.
ಸಮಗ್ರ ಶಿಕ್ಷಣ ಯೋಜನೆಯಡಿಯಲ್ಲಿ ಅನುದಾನ ಪಡೆಯಲು ಎನ್‌ಇಪಿ–2020 ಮತ್ತು ಪಿಎಂಶ್ರೀ ಯೋಜನೆ ಜಾರಿಗೊಳಿಸಬೇಕು ಎಂಬ ಕೇಂದ್ರದ ನಿರ್ಧಾರವು ಸಂವಿಧಾನಬಾಹಿರ, ಕಾನೂನುಬಾಹಿರ ಮತ್ತು ಅಸಮಂಜಸ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.