ADVERTISEMENT

ಪ್ರಕೃತಿ ವಿಕೋಪ ಪರಿಹಾರ: ತಮಿಳುನಾಡಿನಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಪಿಟಿಐ
Published 3 ಏಪ್ರಿಲ್ 2024, 13:38 IST
Last Updated 3 ಏಪ್ರಿಲ್ 2024, 13:38 IST
ಸುಪ್ರೀಂ ಕೋರ್ಟ್‌ 
ಸುಪ್ರೀಂ ಕೋರ್ಟ್‌    

ನವದೆಹಲಿ: ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ತನಗೆ ನೀಡಬೇಕಾದ ಹಣವನ್ನು ಕೇಂದ್ರ ಸರ್ಕಾರ ತಡೆಹಿಡಿದಿದೆ ಎಂದು ಆರೋಪಿಸಿರುವ ತಮಿಳುನಾಡು ಸರ್ಕಾರ, ಹಣ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

ಎಂ.ಕೆ.ಸ್ಟಾಲಿನ್‌ ನೇತೃತ್ವದ ಡಿಎಂಕೆ ಸರ್ಕಾರವು ಸಂವಿಧಾನದ 131ನೇ ವಿಧಿಯಡಿ ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೊಕದ್ದಮೆ ದಾಖಲಿಸಿದೆ.

ಇತ್ತೀಚೆಗೆ ಎದುರಾಗಿದ್ದ ಪ್ರವಾಹ ಮತ್ತು ಮೈಚಾಂಗ್‌ ಚಂಡಮಾರುತದಿಂದ ಭಾರಿ ಹಾನಿಯಾಗಿದ್ದು, ₹37,000 ಕೋಟಿಗೂ ಹೆಚ್ಚು ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಅದು ಮನವಿ ಮಾಡಿದೆ. 

ADVERTISEMENT

ಮಧ್ಯಂತರ ಪರಿಹಾರವಾಗಿ ₹2,000 ಕೋಟಿ ಬಿಡುಗಡೆಗೆ ಕೇಂದ್ರಕ್ಕೆ ನಿರ್ದೇಶಿಸುವಂತೆಯೂ ಅದು ಅರ್ಜಿಯಲ್ಲಿ ಕೋರಿದೆ. 

ಇತ್ತೀಚೆಗೆ ಕರ್ನಾಟಕ ಸರ್ಕಾರ ಸಹ ಬರ ಪರಿಸ್ಥಿತಿ ಎದುರಿಸಲು ಕೇಂದ್ರ ಸರ್ಕಾರ ತನಗೆ ಹಣಕಾಸಿನ ನೆರವು ನೀಡುತ್ತಿಲ್ಲ ಎಂದು ಆರೋಪಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ಹಣ ಬಿಡುಗಡೆ ಮಾಡಲು ನಿರ್ದೇಶಿಸುವಂತೆ ಕೋರಿತ್ತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.