
ಪಿಟಿಐ
ಚೆನ್ನೈ: ತಮಿಳುನಾಡಿನ ಉನ್ನತ ಶಿಕ್ಷಣ ಸಚಿವ ಕೆ. ಪೊನ್ಮುಡಿ ಅವರು ಗುರುವಾರ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾದರು.
ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಇದೇ ವರ್ಷದ ಜುಲೈ ತಿಂಗಳಿನಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಸಚಿವ ಪೊನ್ಮುಡಿ ಹಾಗೂ ಅವರ ಮಗನಾದ ಸಂಸದ ಗೌತಂ ಸಿಗಮಣಿ ಅವರಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ ದಾಳಿ ನಡೆಸಿದ್ದರು. ಈ ಹಿಂದೆಯೂ ಪೊನ್ಮುಡಿ ಅವರನ್ನು ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.