ಚೆನ್ನೈ: ‘ರಾಷ್ಟ್ರಪತಿಯವರ ಪರಿಶೀಲನೆಗೆ ರವಾನೆ ಆಗಿದ್ದ 10 ಮಸೂದೆಗಳಿಗೆ ಅಂಕಿತ ದೊರೆತಿದೆಯೆಂದು ಭಾವಿಸಬೇಕು’ ಎಂದು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಉಲ್ಲೇಖವಾಗಿದ್ದ ಕಾನೂನುಗಳು ತಮಿಳುನಾಡಿನಲ್ಲಿ ಕಾಯ್ದೆಯಾಗಿ ಜಾರಿಗೆ ಬಂದಿವೆ.
ಈ ಮಸೂದೆಗಳು ತಮಿಳುನಾಡು ವಿಧಾನಸಭೆಯಲ್ಲಿ ಎರಡನೆಯ ಬಾರಿಗೆ ಅಂಗೀಕಾರ ಪಡೆದು ರಾಜ್ಯಪಾಲರಿಗೆ ರವಾನೆ ಆಗಿದ್ದವು.
ಸುಪ್ರೀಂ ಕೋರ್ಟ್‌ನ ತೀರ್ಪು ವೆಬ್‌ಸೈಟ್‌ನಲ್ಲಿ ಲಭ್ಯವಾದ ನಂತರ ಅವುಗಳನ್ನು ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ.
‘ಇತಿಹಾಸ ನಿರ್ಮಾಣ ಆಗಿದೆ. ಇವು ಭಾರತದಲ್ಲಿ ರಾಜ್ಯಪಾಲರ ಅಥವಾ ರಾಷ್ಟ್ರಪತಿಯವರ ಸಹಿ ಇಲ್ಲದೆಯೇ, ಸುಪ್ರೀಂ ಕೋರ್ಟ್‌ನ ತೀರ್ಪಿನ ಬಲದ ಆಧಾರದಲ್ಲಿ ಜಾರಿಗೆ ಬಂದಿರುವ ಮೊದಲ ಕಾಯ್ದೆಗಳು’ ಎಂದು ಡಿಎಂಕೆ ರಾಜ್ಯಸಭಾ ಸದಸ್ಯ ಪಿ. ವಿಲ್ಸನ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.