ADVERTISEMENT

ದೀಪಾವಳಿ | ಪಟಾಕಿ ಅವಘಡ: ತಮಿಳುನಾಡಿನಲ್ಲಿ 89 ಜನರಿಗೆ ಗಾಯ

ಪಿಟಿಐ
Published 20 ಅಕ್ಟೋಬರ್ 2025, 11:34 IST
Last Updated 20 ಅಕ್ಟೋಬರ್ 2025, 11:34 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಮೆಟಾ ಎಐ

ಚೆನ್ನೈ: ಪಟಾಕಿ ಅವಘಡಗಳಿಂದಾಗಿ ರಾಜ್ಯದಾದ್ಯಂತ ಇದುವರೆಗೆ 89 ಜನರು ಗಾಯಗೊಂಡಿದ್ದಾರೆ ಎಂದು ತಮಿಳುನಾಡು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮಾ. ಸುಬ್ರಮಣಿಯನ್ ಸೋಮವಾರ ತಿಳಿಸಿದ್ದಾರೆ.

ADVERTISEMENT

ಕಿಲ್ಪಾಕ್ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿ ತುರ್ತು ಸಂದರ್ಭದಲ್ಲಿ ಅಗತ್ಯ ಸಿದ್ದತೆಗಳ ಬಗ್ಗೆ ಪರಿಶೀಲನೆ ನಡೆಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.

‘ಪಟಾಕಿ ಅವಘಡಗಳಿಂದಾಗಿ ರಾಜ್ಯದಲ್ಲಿ 89 ಜನರು ಗಾಯಗೊಂಡಿದ್ದಾರೆ. ಈ ಪೈಕಿ 41 ಜನರು ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ. ಉಳಿದ 48 ಜನರಿಗೆ ಚಿಕಿತ್ಸೆ ನಡೆಯುತ್ತಿದೆ. 32 ಜನರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಆದರೆ, ಯಾವುದೇ ಸಾವು ಸಂಭವಿಸಿರುವುದು ವರದಿಯಾಗಿಲ್ಲ’ ಎಂದು ಹೇಳಿದ್ದಾರೆ.

‘ಪಟಾಕಿ ಅವಘಡಗಳಿಗೆ ತುರ್ತು ಚಿಕಿತ್ಸೆ ನೀಡಲು ಎಲ್ಲಾ ಸರ್ಕಾರಿ ಆಸ್ಪತ್ರೆಗಳು, ಜಿಲ್ಲಾ ಸರ್ಕಾರಿ ಕೇಂದ್ರ ಆಸ್ಪತ್ರೆಗಳು ಮತ್ತು ಬ್ಲಾಕ್ ಸರ್ಕಾರಿ ಆಸ್ಪತ್ರೆಗಳಲ್ಲಿ ಸುಟ್ಟಗಾಯಗಳ ಚಿಕಿತ್ಸೆಗಾಗಿ ವಿಶೇಷ ವಾರ್ಡ್ ಅನ್ನು ಸ್ಥಾಪಿಸಲಾಗಿದೆ. ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ 20 ಹಾಸಿಗೆಗಳನ್ನು ಇದಕ್ಕೆ ಮೀಸಲಿರಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.