ADVERTISEMENT

ಚೆನ್ನೈ: ಶಾಲಾ ಮಕ್ಕಳಿಗೆ ಉಚಿತವಾಗಿ ಬೆಳಗಿನ ಉಪಾಹಾರ

​ಪ್ರಜಾವಾಣಿ ವಾರ್ತೆ
Published 27 ಜುಲೈ 2022, 19:45 IST
Last Updated 27 ಜುಲೈ 2022, 19:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚೆನ್ನೈ: ಒಂದರಿಂದ ಐದನೇ ತರಗತಿವರೆಗಿನ ಮಕ್ಕಳಿಗೆ ಬೆಳಗಿನ ತಿಂಡಿಯನ್ನು ಉಚಿತವಾಗಿ ವಿತರಿಸುವರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯ ಮೊದಲ ಹಂತದ ಅನುಷ್ಠಾನವು ಸೆಪ್ಟೆಂಬರ್‌ ಮಧ್ಯಭಾಗದಿಂದ ಪ್ರಾರಂಭವಾಗಲಿದೆ. ಇದಕ್ಕಾಗಿ 1,545 ಸರ್ಕಾರಿ ಶಾಲೆಗಳನ್ನು ಆಯ್ಕೆ ಮಾಡಲಾಗಿದೆ. ಮೊದಲ ಹಂತದ ಅನುಷ್ಠಾನದಿಂದ1.14 ಲಕ್ಷ ಮಕ್ಕಳಿಗೆ ಪ್ರಯೋಜನವಾಗಲಿದೆ.

‘ಸೋಮವಾರದಿಂದ ಶುಕ್ರವಾರದವರೆಗೆ ಬೆಳಗಿನ ತಿಂಡಿಯನ್ನು ಬಿಸಿ ಬಿಸಿಯಾಗಿ ನೀಡಲು ಸರ್ಕಾರ ಉದ್ದೇಶಿಸಿದೆ. ಪ್ರತಿ ದಿನವೂ ಬೇರೆ ಬೇರೆ ತಿಂಡಿಗಳನ್ನು, ಅಂದರೆ, ಉಪ್ಪಿಟ್ಟು, ಕಿಚಡಿ, ಪೊಂಗಲ್‌ ನೀಡಲಾಗುವುದು. ಶೂಕ್ರವಾರದಂದು ರವಾ ಕೇಸರಿಬಾತ್‌ ಅಥವಾ ಶಾವಿಗೆ ಕೇಸರಿಬಾತ್‌ ನೀಡಲು ಯೋಜಿಸಲಾಗಿದೆ. ಇದಕ್ಕಾಗಿ ಸರ್ಕಾರವು ಒಟ್ಟು ₹33.56 ಕೋಟಿ ಮೀಸಲಿರಿಸಿದೆ’ ಎಂದು ಸರ್ಕಾರದ ಉನ್ನತ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.

ರಾಜ್ಯ ಸರ್ಕಾರಕ್ಕೆ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಅವರ ಪ್ರಮುಖ ಐದು ಘೋಷಣೆಗಳಲ್ಲಿ ಬೆಳಗಿನ ತಿಂಡಿಯನ್ನು ಉಚಿತವಾಗಿ ನೀಡುವುದೂ ಒಂದಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.