ADVERTISEMENT

ಕಲ್ಲಕುರಿಚಿ ಪ್ರಕರಣ: ವಿದ್ಯಾರ್ಥಿನಿ ತಂದೆಯ ಅರ್ಜಿ ಪುರಸ್ಕರಿಸದ ಸುಪ್ರೀಂ ಕೋರ್ಟ್

ಪಿಟಿಐ
Published 19 ಜುಲೈ 2022, 11:38 IST
Last Updated 19 ಜುಲೈ 2022, 11:38 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ತಮಿಳುನಾಡಿನ ಕಲ್ಲಕುರಿಚಿಯ ಚಿನ್ನಸೇಲಂನಲ್ಲಿರುವ ಖಾಸಗಿ ವಸತಿ ಶಾಲೆಯೊಂದರ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಪ್ರಕರಣದಲ್ಲಿ ಮರು ಮರಣೋತ್ತರ ಪರೀಕ್ಷೆ ನಡೆಸುವ ವೈದ್ಯರ ತಂಡಕ್ಕೆ ತನ್ನ ಆಯ್ಕೆಯ ವೈದ್ಯರನ್ನು ಸೇರಿಸುವಂತೆ ಆಕೆಯ ತಂದೆ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ವಜಾಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಅವರಿದ್ದ ನ್ಯಾಯಪೀಠವು ಈ ಅರ್ಜಿಯ ವಿಚಾರಣೆ ನಡೆಸಿದೆ. ‘ಮರು ಮರಣೋತ್ತರ ಪರೀಕ್ಷೆಗಾಗಿ ಹೈಕೋರ್ಟ್ ವೈದ್ಯರ ಸಮಿತಿಯನ್ನು ರಚಿಸಿದೆ. ನಿಮಗೆ ಹೈಕೋರ್ಟ್ ಮೇಲೆ ನಂಬಿಕೆ ಇಲ್ಲ. ಕ್ಷಮಿಸಿ, ನಾವು ಇದಕ್ಕೆ ಅವಕಾಶ ನೀಡುವುದಿಲ್ಲ’ ಎಂದು ನ್ಯಾಯಪೀಠ ಹೇಳಿದೆ.

ಮರು ಮರಣೋತ್ತರ ಪರೀಕ್ಷೆಗೆ ಮದ್ರಾಸ್ ಹೈಕೋರ್ಟ್ಸೋಮವಾರ ಆದೇಶಿಸಿತ್ತು. ಆದರೆ ವಿದ್ಯಾರ್ಥಿನಿಯ ತಂದೆಯ ಈ ಮನವಿಯನ್ನು ಪುರಸ್ಕರಿಸಿರಲಿಲ್ಲ.

ADVERTISEMENT

ಬಾಲಕಿಯ ಸಾವಿಗೆ ನ್ಯಾಯ ದೊರೆಯಬೇಕೆಂದು ಆಗ್ರಹಿಸಿ ಕಲ್ಲಕುರಿಚಿಯಲ್ಲಿ ಈಚೆಗೆ ನಡೆದಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು.

ಇವನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.