ADVERTISEMENT

ಜಗಿಯುವ ತಂಬಾಕು ನಿಷೇಧಕ್ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2020, 20:26 IST
Last Updated 11 ಏಪ್ರಿಲ್ 2020, 20:26 IST
   

ನವದೆಹಲಿ: ‘ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಜಗಿಯುವ ತಂಬಾಕು ಬಳಕೆಯನ್ನು ನಿಷೇಧಿಸಬೇಕು’ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಈ ಸಂಬಂಧ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಸಚಿವಾಲಯ ಪತ್ರ ಬರೆದಿದೆ.

‘ತಂಬಾಕು ಉತ್ಪನ್ನಗಳಾದ ಪಾನ್‌ ಮಸಾಲ, ಸುಪಾರಿ ತಿನ್ನುವ ಜನರು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುತ್ತಾರೆ. ಇದರಿಂದ ಸೋಂಕು ಹರಡುವಸಾಧ್ಯತೆ ಇದೆ’ ಎಂದು ಪತ್ರದಲ್ಲಿ ವಿವರಿಸಲಾಗಿದೆ.

ADVERTISEMENT

ಸಾಂಕ್ರಾಮಿಕ ರೋಗಗಳ ಕಾಯ್ದೆ, ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಐಪಿಸಿ ಮತ್ತು ಸಿಆರ್‌ಪಿಸಿ ಅಡಿಯಲ್ಲಿಕೋವಿಡ್‌–19 ತಡೆಗೆ
ರಾಜ್ಯ ಮತ್ತು ಕೇಂದ್ರಾಡಳಿತ ಸರ್ಕಾರಗಳು ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಪತ್ರದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.