ADVERTISEMENT

ಇಂದಿನಿಂದ ರಾಮರಾಜ್ಯ ಶುರು, ಎಲ್ಲ ಅಸಮಾನತೆಗಳು ಕೊನೆಗೊಳ್ಳಲಿವೆ: ರಾಮ ಮಂದಿರ ಅರ್ಚಕ

‘ಇಂದಿನಿಂದ ರಾಮರಾಜ್ಯ ಶುರುವಾಗಲಿದೆ’ ಎಂದು ಅಯೋಧ್ಯೆ ರಾಮ ಮಂದಿರದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಜನವರಿ 2024, 5:13 IST
Last Updated 22 ಜನವರಿ 2024, 5:13 IST
<div class="paragraphs"><p>ಶ್ರೀರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್‌</p></div>

ಶ್ರೀರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್‌

   

ಪಿಟಿಐ ಚಿತ್ರ

ಅಯೋಧ್ಯೆ: ‘ಇಂದಿನಿಂದ ರಾಮರಾಜ್ಯ ಶುರುವಾಗಲಿದೆ’ ಎಂದು ಅಯೋಧ್ಯೆ ರಾಮ ಮಂದಿರದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ.

ADVERTISEMENT

ಈ ಕುರಿತು ಸುದ್ದಿ ಸಂಸ್ಥೆ ಎಎನ್‌ಐ X ನಲ್ಲಿ ಸೋಮವಾರ ಮಾಹಿತಿ ನೀಡಿದೆ.

‘ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಆಗುವ ಮೂಲಕ ಎಲ್ಲ ಅಸಮಾನತೆಗಳು ಕೊನೆಗೊಳ್ಳುತ್ತವೆ. ರಾಮ ರಾಜ್ಯ ಶುರು ಆಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

‘ಇನ್ಮುಂದೆ ಎಲ್ಲರೂ ಸಂತುಷ್ಟವಾಗಿ ಜೀವಿಸುತ್ತಾರೆ. ಭಗವಂತ ರಾಮ ಎಲ್ಲರಿಗೂ ಆಶೀರ್ವದಿಸಲಿದ್ದಾನೆ’ ಎಂದು ಅವರು ಹೇಳಿದ್ದಾರೆ.

ಇಂದು ನಡೆಯಲಿರುವ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಅಯೋಧ್ಯೆ ನಗರ ಸಜ್ಜಾಗಿದೆ. ಇದಕ್ಕಾಗಿ ದೇಶದ ಅನೇಕ ನಗರ, ಪಟ್ಟಣ, ಗ್ರಾಮಗಳಲ್ಲಿ ಸಂಭ್ರಮ ಮನೆ ಮಾಡಿದೆ.

ರಾಮ ಪ್ರಾಣ ಪ್ರತಿಷ್ಠಾಪನೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದ ಅಯೋಧ್ಯೆಗೆ ಪ್ರಯಾಣ ಬೆಳೆಸಿದರು. ಅವರು 10.25 ಕ್ಕೆ ದೆಹಲಿ ತಲುಪುವ ನಿರೀಕ್ಷೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.