ADVERTISEMENT

ದೆಹಲಿ: ಎರಡು ವರ್ಷದ ಮಗುವನ್ನು ಕಚ್ಚಿ ಕೊಂದ ಬೀದಿ ನಾಯಿಗಳ ಗುಂಪು

ಪಿಟಿಐ
Published 25 ಫೆಬ್ರುವರಿ 2024, 15:25 IST
Last Updated 25 ಫೆಬ್ರುವರಿ 2024, 15:25 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನವದೆಹಲಿ: ಇಲ್ಲಿನ ತುಘಲಕ್ ‍ಪ್ರದೇಶದ ಧೋಭಿ ಘಾಟ್ ಪ್ರದೇಶದಲ್ಲಿ ಎರಡು ವರ್ಷದ ಹೆಣ್ಣು ಮಗುವೊಂದನ್ನು ಬೀದಿ ನಾಯಿಗಳ ಗುಂಪೊಂದು ಕಚ್ಚಿ ಕೊಂದು ಹಾಕಿವೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಶನಿವಾರ ಸಂಜೆ ಸುಮಾರು 6 ಗಂಟೆ ವೇಳೆಗೆ ಘಟನೆ ನಡೆದಿದ್ದು, ಮನೆಯ ಹೊರಗೆ ಕುಳಿತಿದ್ದ ಮಗುವಿನ ಮೇಲೆ 4–5 ಬೀದಿ ನಾಯಿಗಳು ದಾಳಿ ನಡೆಸಿವೆ. ಆಕೆಯನ್ನು ಕೆಲವು ಮೀಟರ್‌ ದೂರ ಎಳೆದುಕೊಂಡುಹೋಗಿ ಕಚ್ಚಿ ಕೊಂದು ಹಾಕಿವೆ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ಹೇಳಿದ್ದಾರೆ.

‘ಈ ಘಟನೆ ದುರದೃಷ್ಟಕರ. ಪಶು ವೈದ್ಯರ ತಂಡ ಸ್ಥಳಕ್ಕೆ ಭೇಟಿ ನೀಡಿ, ಅಲ್ಲಿದ್ದ ನಾಯಿಗಳಿಗೆ ಚುಚ್ಚುಮದ್ದು ನೀಡಿರುವುದರ ಹಾಗೂ ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಿರುವುದರ ಬಗ್ಗೆ ಖಚಿತ ಪಡಿಸಿದ್ದಾರೆ. ಪೊಲೀಸ್ ತನಿಖೆಯಿಂದ ಎಲ್ಲವೂ ತಿಳಿಯಲಿದೆ’ ಎಂದು ನವದೆಹಲಿ ಮುನ್ಸಿಪಲ್ ಕೌನ್ಸಿಲ್‌ನ ಅಧಿಕಾರಿ ಹೇಳಿದ್ದಾರೆ.

ಕೆಲವು ಸ್ಥಳೀಯರು ಬೀದಿ ನಾಯಿಗಳಿಗೆ ಆಹಾರ ನೀಡುತ್ತಾರೆ. ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಮಗುವಿನ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.