ನವದೆಹಲಿ: ಟೂಲ್‌ಕಿಟ್ ಪ್ರಕರಣದ ಆರೋಪಿ ಶಾಂತನು ಮುಲುಕ್‌ಗೆ ದೆಹಲಿ ನ್ಯಾಯಾಲಯವು ಗುರುವಾರ ಬಂಧನದಿಂದ ರಕ್ಷಣೆ ನೀಡಿದೆ.
‘ಶಾಂತನು ಮುಲುಕ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತಾಗಿ ಪ್ರತಿಕ್ರಿಯಿಸುವುದಕ್ಕೂ ಮುನ್ನ ಈ ಬಗ್ಗೆ ತನಿಖೆ ನಡೆಸಲು ಹೆಚ್ಚಿನ ಸಮಯ ಅವಕಾಶ ಬೇಕು’ ಎಂದು ದೆಹಲಿ ಪೊಲೀಸರು ಕೇಳಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಮಾರ್ಚ್ 9ರ ವರೆಗೆ ಶಾಂತನು ಅವರಿಗೆ ಬಂಧನದಿಂದ ರಕ್ಷಣೆ ನೀಡಿದೆ.
‘ಈ ಪ್ರಕರಣ ಸಂಬಂಧ ಮುಂದಿನ ವಿಚಾರಣೆ ಮಾರ್ಚ್ 9 ರಂದು ನಡೆಸಲಾಗುವುದು. ಅಲ್ಲಿಯವರೆಗೆ ಪೊಲೀಸರು ಶಾಂತನು ಅವರನ್ನು ಬಂಧಿಸಬಾರದು’ ಎಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಧರ್ಮೇಂದರ್ ರಾಣಾ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.