ADVERTISEMENT

ಟೂಲ್‌ ಕಿಟ್ ಪ್ರಕರಣ: ಮತ್ತಿಬ್ಬರಿಗೆ ಜಾಮೀನು ರಹಿತ ವಾರಂಟ್‌

ಪಿಟಿಐ
Published 15 ಫೆಬ್ರುವರಿ 2021, 8:00 IST
Last Updated 15 ಫೆಬ್ರುವರಿ 2021, 8:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ರೈತರ ಪ್ರತಿಭಟನೆಯ ವಿಚಾರದಲ್ಲಿ ಅಂತರರಾಷ್ಟ್ರೀಯ ಪರಿಸರ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ ಅವರೊಂದಿಗೆ ‘ಟೂಲ್ ಕಿಟ್‘ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಇಬ್ಬರ ವಿರುದ್ಧ ‘ಜಾಮೀನು ರಹಿತ ವಾರಂಟ್‘ ಹೊರಡಿಸಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರನ್ನು ಬಂಧಿಸಿದ ಎರಡು ದಿನಗಳ ನಂತರ ನಿಕಿತಾ ಜೋಕೋಬ್‌ ಮತ್ತು ಶಾಂತನು ಎಂಬುವವರ ವಿರುದ್ಧ ದೆಹಲಿ ಪೊಲೀಸರು ಜಾಮೀನು ರಹಿತ ವಾರಂಟ್ ಹೊರಡಿಸಿದ್ದಾರೆ.

‘ಟೂಲ್‌ ಕಿಟ್ ಸಿದ್ಧಪಡಿಸುವಲ್ಲಿ ಈ ಇಬ್ಬರೂ ಭಾಗಿಯಾಗಿದ್ದು, ಖಲಿಸ್ತಾನಿ ಪರ ವ್ಯಕ್ತಿಗಳೊಂದಿಗೆ ನೇರ ಸಂಪರ್ಕದಲ್ಲಿದ್ದಾರೆ‘ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಟೂಲ್‌ಕಿಟ್ ಪ್ರಕರಣದಲ್ಲಿ ಬಂಧಿಸಿರುವ ದಿಶಾ ರವಿ ಅವರನ್ನು ದೆಹಲಿ ನ್ಯಾಯಾಲಯ ವಿಚಾರಣೆಗಾಗಿ ಐದು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.