ADVERTISEMENT

Top 10 News | ಈ ದಿನದ ಪ್ರಮುಖ 10 ಸುದ್ದಿಗಳು – ಸೆಪ್ಟೆಂಬರ್ 8 ಶುಕ್ರವಾರ 2023

ಪ್ರಜಾವಾಣಿ ವಿಶೇಷ
Published 8 ಸೆಪ್ಟೆಂಬರ್ 2023, 13:14 IST
Last Updated 8 ಸೆಪ್ಟೆಂಬರ್ 2023, 13:14 IST
ರಾಜ್ಯ, ರಾಷ್ಟ್ರೀಯ, ವಿದೇಶಕ್ಕೆ ಸಂಬಂಧಿಸಿದ ಈ ದಿನದ ಪ್ರಮುಖ ಹತ್ತು ಸುದ್ದಿಗಳು..
ರಾಜ್ಯ, ರಾಷ್ಟ್ರೀಯ, ವಿದೇಶಕ್ಕೆ ಸಂಬಂಧಿಸಿದ ಈ ದಿನದ ಪ್ರಮುಖ ಹತ್ತು ಸುದ್ದಿಗಳು..   

ಲೋಕಸಭೆ ಚುನಾವಣೆ: ಜೆಡಿಎಸ್ ಜತೆ ಬಿಜೆಪಿ ಮೈತ್ರಿ, G20 Summit: ದೆಹಲಿಗೆ ಬಂದಿಳಿದ ಬ್ರಿಟನ್ ಪ್ರಧಾನಿ ರಿಷಿ, ಜಪಾನ್ ಪ್ರಧಾನಿ ಕಿಶಿಡಾ, ತಮಿಳುನಾಡಿಗೆ ಕಾವೇರಿ ನೀರು: ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ಸೇರಿದಂತೆ ಈ ದಿನದ ಪ್ರಮುಖ ಹತ್ತು ಸುದ್ದಿಗಳು ಇಲ್ಲಿವೆ

G20 Summit: ದೆಹಲಿಗೆ ಬಂದಿಳಿದ ಬ್ರಿಟನ್ ಪ್ರಧಾನಿ ರಿಷಿ, ಜಪಾನ್ ಪ್ರಧಾನಿ ಕಿಶಿಡಾ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೆ.9 ಹಾಗೂ ಸೆ.10ರಂದು ಜಿ–20 ಶೃಂಗಸಭೆ ನಡೆಯಲಿದೆ. ಶೃಂಗಸಭೆಯಲ್ಲಿ ಭಾಗವಹಿಸಲು ಬ್ರಿಟನ್ ಪ್ರಧಾನಿ ರಿಷಿ ಸುನಕ್ ದಂಪತಿ ಹಾಗೂ ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ದಂಪತಿ ಇಂದು ಭಾರತಕ್ಕೆ ಆಗಮಿಸಿದ್ದಾರೆ.

ಸಂಪೂರ್ಣ ಸುದ್ದಿ ಓದಿ

ADVERTISEMENT

Tripura Bypoll Result: ಬೊಕ್ಸಾನಗರ, ಧನಪುರ ಕ್ಷೇತ್ರಗಳಲ್ಲಿ ಬಿಜೆಪಿಗೆ ಗೆಲುವು

ತ್ರಿಪುರಾದ ಬೊಕ್ಸಾನಗರ ಮತ್ತು ಧನಪುರ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ದಾಖಲಿಸಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಸಂಪೂರ್ಣ ಸುದ್ದಿ ಓದಿ

10ನೇ ತರಗತಿ ಮಕ್ಕಳಿಗೂ ಮೊಟ್ಟೆ: ಬಾಲಕಿ ಬರೆದ ಪತ್ರ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

‘8ನೇ ತರಗತಿವರೆಗಿನ ಮಕ್ಕಳಿಗಷ್ಟೇ ಮೊಟ್ಟೆ ವಿತರಿಸುತ್ತಿದ್ದುದರಿಂದ, ಅವರು ಇತರ ಮಕ್ಕಳೊಂದಿಗೆ ಹಂಚಿಕೊಂಡು ತಿನ್ನುತ್ತಿದ್ದರು. ಆ ಮಾನವೀಯ ಗುಣ ಸರ್ಕಾರದ ಗಮನ ಸೆಳೆದ ಪರಿಣಾಮವಾಗಿಯೇ 9, 10ನೇ ತರಗತಿ ಮಕ್ಕಳಿಗೂ ಮೊಟ್ಟೆ ನೀಡುವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಚಾಲನೆ ನೀಡಿದೆ.

ಸಂಪೂರ್ಣ ಸುದ್ದಿ ಓದಿ

ಲೋಕಸಭೆ ಚುನಾವಣೆ | ಜೆಡಿಎಸ್ ಜತೆ ಮೈತ್ರಿ ಖಚಿತ, ಈಗಾಗಲೇ 4 ಕ್ಷೇತ್ರ ಅಂತಿಮ: BSY

2024ರ ಲೋಕಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷವು (ಬಿಜೆಪಿ) ಜನತಾ ದಳ (ಜಾತ್ಯತೀತ) ಜೊತೆ ಮೈತ್ರಿ ಮಾಡಿಕೊಂಡಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಹೇಳಿದ್ದಾರೆ.

ಸಂಪೂರ್ಣ ಸುದ್ದಿ ಓದಿ

ತಮಿಳುನಾಡಿಗೆ ಕಾವೇರಿ ನೀರು: ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ, ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುವುದನ್ನು ಪ್ರತಿಭಟಿಸಿ ಬಿಜೆಪಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿತು.

ಸಂಪೂರ್ಣ ಸುದ್ದಿ ಓದಿ

G20 Summit: 15ಕ್ಕೂ ಹೆಚ್ಚು ದ್ವಿಪಕ್ಷೀಯ ಸಭೆಗಳಲ್ಲಿ ಪ್ರಧಾನಿ ಮೋದಿ ಭಾಗಿ

ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ವಿಶ್ವದ ಪ್ರಮುಖ ನಾಯಕರು ಭಾರತಕ್ಕೆ ಆಗಮಿಸುತ್ತಿದ್ದಾರೆ. ಮೂರು ದಿನಗಳ ಈ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 15ಕ್ಕೂ ಹೆಚ್ಚು ದ್ವಿಪಕ್ಷೀಯ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸಂಪೂರ್ಣ ಸುದ್ದಿ ಓದಿ

ಬಿಜೆಪಿ ಮತೀಯವಾದ, ಕೋಮುವಾದಿ ಪಕ್ಷ: ಸಂಸದ ಬಿ.ಎನ್.ಬಚ್ಚೇಗೌಡ ವಾಗ್ದಾಳಿ

ಬಿಜೆಪಿ ಕೋಮುವಾದಿ, ಮತೀಯವಾದಿ ಪಕ್ಷ ಎಂದು ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ಪಕ್ಷದ ವಿರುದ್ಧವೇ ಟೀಕಾಪ್ರಹಾರ ನಡೆಸಿದರು.

ಸಂಪೂರ್ಣ ಸುದ್ದಿ ಓದಿ

G20 Summit: ಔತಣಕೂಟಕ್ಕೆ ಮಲ್ಲಿಕಾರ್ಜುನ ಖರ್ಗೆಗೆ ಆಹ್ವಾನ ಇಲ್ಲ 

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಆಯೋಜಿಸಿರುವ ಜಿ 20 ಶೃಂಗಸಭೆಯ ಔತಣಕೂಟಕ್ಕೆ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡಿಲ್ಲ.

ಸಂಪೂರ್ಣ ಸುದ್ದಿ ಓದಿ

ICC World Cup 2023: ಸಚಿನ್ ತೆಂಡೂಲ್ಕರ್‌ಗೆ ‘ಗೋಲ್ಡನ್ ಟಿಕೆಟ್’ ನೀಡಿದ ಜಯ್ ಶಾ

ಅಕ್ಟೋಬರ್ 5ರಂದು ಭಾರತದಲ್ಲಿ ಆರಂಭವಾಗಲಿರುವ ಏಕದಿನ ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯ ಅಂಗವಾಗಿ ಭಾರತೀಯ ಕ್ರಿಕೆಟ್ ಮಂಡಳಿಯ ಕಾರ್ಯದರ್ಶಿ ಜಯ್ ಶಾ ಅವರು ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರಿಗೆ ಗೋಲ್ಡನ್ ಟಿಕೆಟ್ ನೀಡುವ ಮೂಲಕ ಆಹ್ವಾನ ನೀಡಿದ್ದಾರೆ.

ಸಂಪೂರ್ಣ ಸುದ್ದಿ ಓದಿ

Asia Cup: ಭಾರತ–ಪಾಕಿಸ್ತಾನ ನಡುವಿನ ಸೂಪರ್–4 ಪಂದ್ಯಕ್ಕೆ ಮೀಸಲು ದಿನ ನಿಗದಿ

ಶ್ರೀಲಂಕಾದ ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಇದೇ 10ರಂದು ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಸೂಪರ್–4 ಹಂತದ ಪಂದ್ಯಕ್ಕೆ ಮೀಸಲು ದಿನವನ್ನು ಏಷ್ಯನ್ ಕ್ರಿಕೆಟ್ ಮಂಡಳಿ(ಎಸಿಸಿ) ನಿಗದಿ ಮಾಡಿದೆ.

ಸಂಪೂರ್ಣ ಸುದ್ದಿ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.