ADVERTISEMENT

ಭಾರತೀಯ ಸೇನೆಯ ಉನ್ನತಾಧಿಕಾರಿಗಳ ಸಮಾವೇಶ

ಪಿಟಿಐ
Published 5 ನವೆಂಬರ್ 2022, 19:30 IST
Last Updated 5 ನವೆಂಬರ್ 2022, 19:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಭಾರತೀಯ ಸೇನೆಯ ಉನ್ನತ ಮಟ್ಟದ ಅಧಿಕಾರಿಗಳ ಸಮಾಲೋಚನಾ ಸಮಾವೇಶ ಸೋಮವಾರದಿಂದ ಇಲ್ಲಿ ಆರಂಭವಾಗಲಿದ್ದು, ಚೀನಾ ಮತ್ತು ಪಾಕಿಸ್ತಾನದೊಂದಿಗೆ ಗಡಿ ಹಂಚಿಕೊಂಡಿರುವ ಪ್ರದೇಶದಲ್ಲಿ ಭಾರತ ಎದುರಿಸುತ್ತಿರುವ ಭದ್ರತಾ ಸವಾಲುಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.‌

13 ಲಕ್ಷ ಸೈನಿಕರನ್ನು ಒಳಗೊಂಡಿರುವ ಬಲಿಷ್ಠ ಸೇನೆಯ ಸಾಮರ್ಥ್ಯ ಹೆಚ್ಚಳ, ಪ್ರಾದೇಶಿಕ ಭದ್ರತಾ ಸ್ಥಿತಿಗತಿ ಮತ್ತು ರಷ್ಯಾ–ಉಕ್ರೇನ್‌ ಯುದ್ಧದಿಂದ ಉಂಟಾಗುವ ಭೌಗೋಳಿಕ ರಾಜಕೀಯ ಪರಿಣಾಮಗಳ ಬಗ್ಗೆ ಸಮಾವೇಶದಲ್ಲಿ ಚರ್ಚಿಸಲಿದ್ದಾರೆ.

‘ಸಮಾವೇಶದಲ್ಲಿ ಉನ್ನತ ಅಧಿಕಾರಿಗಳು ಭಾರತ–ಚೀನಾ ಗಡಿಯಲ್ಲಿ ಭಾರತೀಯ ಸೇನೆ ಕೈಗೊಂಡಿರುವ ಸಿದ್ಧತೆ ಮತ್ತು ಜಮ್ಮು–ಕಾಶ್ಮೀರದಲ್ಲಿನ ಭಯೋತ್ಪಾದನೆ ವಿರೋಧಿ ಕಾರ್ಯಾಚರಣೆಗಳ ಬಗ್ಗೆ ಸಮಗ್ರವಾದ ಚರ್ಚೆ ನಡೆಸಲಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಇದೇ 11ರ ವರೆಗೆ ಹಲಿಯಲ್ಲಿ ಸಮಾವೇಶ ನಡೆಯಲಿದೆ. 10ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಅವರು ಕಮಾಂಡರ್‌ಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.