ADVERTISEMENT

ದೆಹಲಿಯಲ್ಲಿ ಸಚಿವರು, ಬಿಜೆಪಿ ನಾಯಕರ ಸಭೆ: ಲಸಿಕೆ, ರಾಜಕೀಯ ಬೆಳವಣಿಗೆ ಚರ್ಚೆ

ಪಿಟಿಐ
Published 26 ಜೂನ್ 2021, 7:51 IST
Last Updated 26 ಜೂನ್ 2021, 7:51 IST
ಜೆ.ಪಿ.ನಡ್ಡಾ
ಜೆ.ಪಿ.ನಡ್ಡಾ   

ನವದೆಹಲಿ: ಇಲ್ಲಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಶನಿವಾರ ನಡೆದ ಸಭೆಯಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ರಾಜನಾಥ್ ಸಿಂಗ್‌, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಭಾಗವಹಿಸಿದ್ದರು.

ಸಚಿವರ ಜತೆಗೆ, ಪಕ್ಷದ ವಿವಿಧ ವಿಭಾಗಗಳ ಮುಖ್ಯಸ್ಥರು ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದು ಮೂಲಗಳು ತಿಳಿಸಿವೆ.

ಕೋವಿಡ್‌–19ರ ಲಸಿಕೆ ಅಭಿಯಾನ, ಸರ್ಕಾರದ ಆಡಳಿತ ಹಾಗೂ ರಾಜಕೀಯ ಬೆಳವಣಿಗೆಗಳಿಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ಆಡಳಿತಾರೂಢ ಪಕ್ಷದ ಮುಖಂಡರು ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

ADVERTISEMENT

ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ನಡೆದ ಕೆಲ ಸಭೆಗಳಲ್ಲಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಲ್ಲದೆ, ಹಲವು ಕೇಂದ್ರ ಸಚಿವರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.