ADVERTISEMENT

ನಾಳೆ ಸೋನಿಯಾ ನಿವಾಸದಲ್ಲಿ ಕಾಂಗ್ರೆಸ್‌ ಪ್ರಮುಖ ನಾಯಕರ ಸಭೆ

ಪಿಟಿಐ
Published 2 ಡಿಸೆಂಬರ್ 2022, 8:34 IST
Last Updated 2 ಡಿಸೆಂಬರ್ 2022, 8:34 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಡಿಸೆಂಬರ್‌ 7ರಿಂದ ಪ್ರಾರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರವನ್ನು ಕಟ್ಟಿ ಹಾಕುವ ಕಾರ್ಯತಂತ್ರ ರೂಪಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌ನ ಪ್ರಮುಖ ಮುಂಖಡರು ಶನಿವಾರ ರಾಷ್ಟ್ರ ರಾಜಧಾನಿಯಲ್ಲಿ ಸಭೆ ಸೇರಲಿದ್ದಾರೆ.


ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯಲ್ಲಿ ಕಾಂಗ್ರೆಸ್‌ ನಾಯಕ ಅಧಿರ್ ರಂಜನ್‌ ಚೌಧರಿ, ರಾಜ್ಯಸಭೆಯಲ್ಲಿ ಪಕ್ಷದ ಮುಖಂಡ ಜೈರಾಂ ರಮೇಶ್‌, ಕೆ.ಸುರೇಶ್‌ ಸೇರಿದಂತೆ ಹಲವು ಪ್ರಮುಖ ನಾಯಕರು ಶನಿವಾರ ಸಂಜೆ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.


ಮಾಜಿ ಸಚಿವ ಪಿ.ಚಿದಂಬರಂ, ಮನೀಶ್‌ ತಿವಾರಿ ಕೂಡ ಸೋನಿಯಾ ಗಾಂಧಿ ಅವರ 10ನೇ, ಜನಪತ್‌ ನಿವಾಸದಲ್ಲಿನ ಸಭೆಯಲ್ಲಿ ಭಾಗಿಯಾಗಿ ಪಕ್ಷದ ಇತ್ತೀಚಿನ ಬೆಳವಣಿಗೆಗಳ ಕುರಿತು ಚರ್ಚಿಸಲಿದ್ದಾರೆ. ಖರ್ಗೆ ಪಕ್ಷದ ರಾಷ್ಟ್ರಾಧ್ಯಕ್ಷರಾದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.