ನವದೆಹಲಿ: ಸಂವಿಧಾನದಲ್ಲಿ ಪ್ರಸ್ತಾಪಿಸಿರುವಂತೆ ದೇಶದ ಪ್ರಜೆಗಳ ಹಕ್ಕುಗಳನ್ನು ರಕ್ಷಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ನಾಯಕರು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ದೆಹಲಿಯ ಮಹಾತ್ಮಾ ಗಾಂಧಿ ಸ್ಮಾರಕ ರಾಜ್‌ಘಾಟ್‌ನಲ್ಲಿ ಸತ್ಯಾಗ್ರಹ ಕುಳಿತಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಆರ್‌ಸಿ ಜಾರಿಗೆ ತರಲು ಹೊರಟಿರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ನಡೆಯುತ್ತಿರುವ ಈ ಸತ್ಯಾಗ್ರಹದಲ್ಲಿಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರ ಅವರು ಸೋನಿಯಾ ಗಾಂಧಿ ಅವರಿಗೆ ಜೊತೆಯಾಗಿದ್ದಾರೆ.
ಸೋನಿಯಾ ಗಾಂಧಿ, ಮನಮೋಹನ್ ಸಿಂಗ್ ಮತ್ತು ರಾಹುಲ್ ಗಾಂಧಿ ಅವರು ಸತ್ಯಾಗ್ರಹದಲ್ಲಿ ಸಂವಿಧಾನದ ಮುನ್ನುಡಿ ಓದಿದರು.
‘ಸಂವಿಧಾನದ ಶಕ್ತಿಯನ್ನು ನೆನಪಿಸಲು ಈ ಧರಣಿ ಆಯೋಜಿಸಲಾಗಿದೆ,’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.