ADVERTISEMENT

ಚಲನವಲನದ ಮೇಲೆ ಕಣ್ಗಾವಲು ಆರೋಪ: 2 ಪೊಲೀಸರ ವಿರುದ್ಧ ಎನ್‌ಸಿಬಿ ಅಧಿಕಾರಿ ದೂರು

ಪಿಟಿಐ
Published 12 ಅಕ್ಟೋಬರ್ 2021, 6:13 IST
Last Updated 12 ಅಕ್ಟೋಬರ್ 2021, 6:13 IST
ಎನ್‌ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೇಡೆ (ಶ್ವೇತವಸ್ತ್ರ ಧರಿಸಿದಿರುವವರು) ಅವರು ಸೋಮವಾರ ಮುಂಬೈನಲ್ಲಿರುವ ಎನ್‌ಸಿಬಿ ಕಚೇರಿಗೆ ಆಗಮಿಸಿದರು.
ಎನ್‌ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೇಡೆ (ಶ್ವೇತವಸ್ತ್ರ ಧರಿಸಿದಿರುವವರು) ಅವರು ಸೋಮವಾರ ಮುಂಬೈನಲ್ಲಿರುವ ಎನ್‌ಸಿಬಿ ಕಚೇರಿಗೆ ಆಗಮಿಸಿದರು.   

ಮುಂಬೈ: ಇಬ್ಬರು ಪೊಲೀಸ್ ಅಧಿಕಾರಿಗಳು ತಮ್ಮ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದಾರೆ ಎಂದು ಆರೋಪಿಸಿ ಕ್ರೂಸ್‌ ಡ್ರಗ್ಸ್‌ ಪ್ರಕರಣದ ಮೇಲ್ವಿಚಾರಣೆ ನಡೆಸುತ್ತಿರುವ ಮಾದಕ ವಸ್ತು ನಿಯಂತ್ರಣ ಸಂಸ್ಥೆ(ಎನ್‌ಸಿಬಿ)ಯ ವಲಯ ನಿರ್ದೇಶಕ ಸಮೀರ್‌ ವಾಂಖೆಡೆ ಮುಂಬೈ ಪೊಲೀಸ್ ಠಾಣೆಯೊಂದರಲ್ಲಿ ದೂರು ದಾಖಲಿಸಿದ್ದಾರೆ.

ಎನ್‌ಸಿಬಿ ಅಧಿಕಾರಿಗಳ ಪ್ರಕಾರ, ವಾಂಖೆಡೆ ಅವರು ಇಲ್ಲಿನ ಒಶಿವರ ಉಪನಗರದಲ್ಲಿರುವ ತಮ್ಮ ತಾಯಿಯ ಸಮಾಧಿಗೆ ನಿಯಮಿತವಾಗಿ ಭೇಟಿ ನೀಡುತ್ತಿರುತ್ತಾರೆ. ಇವರ ಚಲನವಲನಗಳನ್ನು ಗಮನಿಸುವುದಕ್ಕಾಗಿ ಒಶಿವರ ಪೊಲೀಸ್ ಠಾಣೆಯ ಇಬ್ಬರು ಅಧಿಕಾರಿಗಳು ಈ ಸ್ಮಶಾನದಲ್ಲಿ ಸಿಸಿಟಿವಿ ಅಳವಡಿಸಿ, ಅದರಿಂದ ದೃಶ್ಯಾವಳಿಗಳನ್ನು ಸಂಗ್ರಹಿಸುತ್ತಿದ್ದಾರೆ.

ಈ ಕುರಿತು ವಾಂಖೆಡೆ ಅವರು ಪೊಲೀಸ್ ಅಧಿಕಾರಿಗಳ ಚಟುವಟಿಕೆ ಕುರಿತು ಮಹಾರಾಷ್ಟ್ರದ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಜೊತೆಗೆ, ಪೊಲೀಸ್‌ ಠಾಣೆಯೊಂದರಲ್ಲಿ ದೂರು ದಾಖಲಿಸಿದ್ದಾರೆ.

ADVERTISEMENT

ಅಕ್ಟೋಬರ್ 3 ರಂದು ವಾಂಖೆಡೆ ಮತ್ತು ತಂಡ, ಮುಂಬೈನ ಕರಾವಳಿಯಲ್ಲಿ ಐಶಾರಾಮಿ ಕ್ರೂಸ್ ಹಡಗಿನ ಮೇಲೆ ದಾಳಿ ನಡೆಸಿ, ಮಾದಕ ವಸ್ತುಗಳೊಂದಿಗೆ ಬಾಲಿವುಡ್‌ ನಟ ಶಾರುಕ್ ಖಾನ್ ಅವರ ಪುತ್ರ ಆರ್ಯನ್ ಮತ್ತಿತರರನ್ನು ಬಂಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.