
ರಾಷ್ಟ್ರೀಯ, ರಾಜ್ಯ, ವಿದೇಶ, ಸಿನಿಮಾ, ಕ್ರೀಡೆಗೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಸ್ವರೂಪ ಬದಲಿಸುವ ಮೂಲಕ ಕೇಂದ್ರ ಸರ್ಕಾರ ಆದಿವಾಸಿಗಳು, ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದವರು ಸೇರಿದಂತೆ ಅಶಕ್ತರ ಬದುಕುವ ಮತ್ತು ಉದ್ಯೋಗದ ಹಕ್ಕು ಕಿತ್ತುಕೊಂಡಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
‘ಕೆಲವು ಸಚಿವರು ಶಾಸಕರ ಭೇಟಿಗೂ ಸಿಗುತ್ತಿಲ್ಲ. ಕೆಲಸ–ಕಾರ್ಯಗಳಿಗೂ ಸ್ಪಂದಿಸುತ್ತಿಲ್ಲ. ಸಚಿವರ ಈ ನಡೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಗಮನಕ್ಕೆ ತಂದಿದ್ದೇವೆ. ನಾಯಕತ್ವ ಬದಲಾವಣೆ ಜೊತೆಗೆ ಸ್ಪಂದಿಸದ ಸಚಿವರ ಬದಲಾವಣೆಯ ಅಗತ್ಯವಿದೆ’ ಎಂದು ಡಿಸಿಎಂ ಆಪ್ತ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಒತ್ತಾಯಿಸಿದರು.
‘ದಲಿತರು ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಿದವರೇ ಸಿದ್ದರಾಮಯ್ಯ. ಕಾಂಗ್ರೆಸ್‌ನಲ್ಲಿರುವ ಮಲ್ಲಿಕಾರ್ಜುನ ಖರ್ಗೆ ಹಾಗೂ ಪರಮೇಶ್ವರ ಅವರು ಯಾವತ್ತೋ ಮುಖ್ಯಮಂತ್ರಿ ಆಗಬೇಕಿತ್ತು. ಅವರನ್ನು ಇಲ್ಲಿಂದ ಖಾಲಿ ಮಾಡಿಸಿ ಒಳಗಡೆ ಹುತ್ತಿನಲ್ಲಿ ಸೇರಿಕೊಂಡಿದ್ದಾರೆ‘ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.
ತಮಿಳುನಾಡಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ನಡೆಸಿದ ಬಳಿಕ 70 ಲಕ್ಷಕ್ಕೂ ಅಧಿಕ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ. ಚುನಾವಣಾ ಹೊಸ್ತಿಲಲ್ಲಿರುವ ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಎಸ್‌ಐಆರ್ ಈಗಾಗಲೇ ವಿವಾದಕ್ಕೆ ಕಾರಣವಾಗಿದೆ.
ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸುವ ವಿಚಾರ ಚರ್ಚೆಯಲ್ಲಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಈ ಬಗ್ಗೆ ಪೋಷಕರಿಂದಲೂ ಒತ್ತಡವಿದೆ. ಅನೇಕ ದೇಶಗಳಲ್ಲಿ ಈಗಾಗಲೇ ಈ ಕ್ರಮ ಕೈಗೊಳ್ಳಲಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲೂ ಈ ವಿಷಯ ಚರ್ಚೆಯಾಗುತ್ತಿದೆ’ ಎಂದರು.
ರಾಷ್ಟ್ರ ರಾಜಧಾನಿಯಲ್ಲಿ ನಡೆದ ಎ.ಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ ಘಟನೆಗೆ ಸಂಬಂಧಿಸಿದಂತೆ ಈವರೆಗೆ ಐದು ಮಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತನನ್ನು (ಐವೈಸಿ) ಇಂದು ಗ್ವಾಲಿಯರ್‌ನಲ್ಲಿ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತ ಮತ್ತು ಬಂಗಾಳದ ರಾಜಕೀಯ ‘ಚಾಣಕ್ಯ’ ಎಂದೇ ಗುರುತಿಸಿಕೊಂಡಿದ್ದ ಮಾಜಿ ಕೇಂದ್ರ ಸಚಿವ ಮುಕುಲ್ ರಾಯ್ ಅವರು ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇರಾನ್ ಹಾಗೂ ಅಮೆರಿಕ ನಡುವೆ ಉದ್ವಿಗ್ನ ಸ್ಥಿತಿ ಹೆಚ್ಚುತ್ತಿರುವಂತೆಯೇ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯರು ಆದಷ್ಟು ಬೇಗನೇ ದೇಶ ಬಿಟ್ಟು ಹೋಗುವಂತೆ ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಇಂದು (ಸೋಮವಾರ) ಸೂಚಿಸಿದೆ.
ಉತ್ತರ ಕೊರಿಯಾದ ಸರ್ವೋಚ್ಚ ನಾಯಕ ಕಿಮ್ ಜಾಂಗ್ ಉನ್ (42) ಅವರು ದೇಶದ ಆಡಳಿತಾರೂಢ ಪಕ್ಷವಾಗಿರುವ ವರ್ಕರ್ಸ್ ಪಾರ್ಟಿಯ ಅತ್ಯುನ್ನತ ಹುದ್ದೆಗೆ ಮರು ಆಯ್ಕೆಯಾಗಿದ್ದಾರೆ.
ದೇಶದ ಅಣ್ವಸ್ತ್ರ ಶಕ್ತಿಯನ್ನು ಬಲಪಡಿಸುವ ಉದ್ದೇಶದಿಂದ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಮತ್ತೆ ಕಿಮ್ ಅವರನ್ನೇ ಸದಸ್ಯರು ಆಯ್ಕೆ ಮಾಡಿದ್ದಾರೆ ಎಂದು ಇಲ್ಲಿನ ಮಾಧ್ಯಮಗಳು ವರದಿ ಮಾಡಿವೆ.
'ಎಲ್ ಮೆಂಚೊ' ಎಂದೇ ಕುಖ್ಯಾತನಾಗಿದ್ದ, ಅಕ್ರಮ ಮಾದಕ ವಸ್ತು ಸಾಗಣೆದಾರ ನೆಮಿಸಿಯೊ ಒಸೆಗುರಾ, ಸೇನಾ ಕಾರ್ಯಾಚರಣೆ ವೇಳೆ ಹತ್ಯೆಯಾಗಿದ್ದಾನೆ ಎಂದು ಮೆಕ್ಸಿಕೊದ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.