
ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

18 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಭಾರತ ಮತ್ತು ಐರೋಪ್ಯ ಒಕ್ಕೂಟದ (ಇಯು) ಮುಕ್ತ ವ್ಯಾಪಾರ ಒಪ್ಪಂದ (ಎಫ್‌ಟಿಎ) ಕನಸು ನನಸಾಗಿದೆ. ಇದು ವೈನ್ ಮತ್ತು ಐಷಾರಾಮಿ ಕಾರು ಪ್ರೇಮಿಗಳ ಉತ್ಸಾಹ ಇಮ್ಮಡಿಗೊಳಿಸಿದೆ. ಭಾರತ ಪ್ರಧಾನಿ ನರೇಂದ್ರ ಮೋದಿ ಈ ಒಪ್ಪಂದವನ್ನು 'ಮದರ್ ಆಫ್ ಆಲ್ ಡೀಲ್ಸ್' (ಎಲ್ಲ ಒಪ್ಪಂದಗಳ ತಾಯಿ) ಎಂದು ಬಣ್ಣಿಸಿದ್ದಾರೆ.
ಬಹು ನಿರೀಕ್ಷೆಯ ಭಾರತ ಮತ್ತು ಐರೋಪ್ಯ ಒಕ್ಕೂಟದ ನಡುವಿನ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಎರಡು ದಶಕಗಳಿಂದ ನಡೆಯುತ್ತಿದ್ದ ಪ್ರಯತ್ನಕ್ಕೆ ಫಲ ಸಿಕ್ಕಿದಂತಾಗಿದೆ. ಐರೋಪ್ಯ ಒಕ್ಕೂಟದ 27 ರಾಷ್ಟ್ರಗಳ ಮಾರುಕಟ್ಟೆ ಪ್ರವೇಶಕ್ಕೆ ಈ ಒಪ್ಪಂದ ಅನುವು ಮಾಡಿಕೊಟ್ಟಿದೆ.
ಕರ್ನಾಟಕದ 6000 ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರನ್ನು ಇಡಲಾಗುವುದು. ಮುಂದಿನ ಬಜೆಟ್‌ನಲ್ಲಿಯೇ ಅಧಿಕೃತ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಮುಂದಿನ ಶೈಕ್ಷಣಿಕ ವರ್ಷದೊಳಗೆ ಸರ್ಕಾರಿ ಶಾಲೆಗಳಿಗೆ 10,800 ಶಿಕ್ಷಕರ ನೇಮಕ ಹಾಗೂ ಅನುದಾನಿತ ಶಾಲೆಗಳಿಗೆ ಶಿಕ್ಷಕರ ನೇಮಕಾತಿಗೆ ಕ್ರಮವಹಿಸಲಾಗುವುದು’ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೋಮವಾರ ಹೇಳಿದರು.
ತಮಿಳು ನಟ ವಿಜಯ್ ಅಭಿನಯದ ‘ಜನ ನಾಯಗನ್’ ಚಿತ್ರಕ್ಕೆ ಯು/ಎ ಪ್ರಮಾಣಪತ್ರ ನೀಡುವಂತೆ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ಮದ್ರಾಸ್ ಹೈಕೋರ್ಟ್‌ನ ವಿಭಾಗೀಯ ಪೀಠವು ರದ್ದುಗೊಳಿಸಿದೆ. ಜತೆಗೆ, ಹೊಸದಾಗಿ ವಿಚಾರಣೆ ನಡೆಸುವಂತೆ ನಿರ್ದೇಶನ ನೀಡಿದೆ.
ಕೌಟುಂಬಿಕ ಕಲಹಕ್ಕೆ ಸಂಬಂಧಿಸಿದಂತೆ ಕಿರುತೆರೆ ನಟಿ ಕಾವ್ಯಾ ಗೌಡ-ಸೋಮಶೇಖರ್ ದಂಪತಿ ಹಾಗೂ ಪ್ರೇಮಾ- ನಂದೀಶ್ ದಂಪತಿ ರಾಮಮೂರ್ತಿನಗರ ಪೊಲೀಸ್ ಠಾಣೆಯ ಪೊಲೀಸರಿಗೆ ದೂರು- ಪ್ರತಿದೂರು ನೀಡಿದ್ದು, ಒಟ್ಟು ಎಂಟು ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಭಾರತ ಮತ್ತು ಐರೋಪ್ಯ ಒಕ್ಕೂಟದ ನಡುವಿನ ಮುಕ್ತ ವ್ಯಾಪಾರ ಒಪ್ಪಂದದಲ್ಲಿ(ಎಫ್‌ಟಿಎ) ಆಮದು ಸುಂಕ ರಿಯಾಯಿತಿ ನೀಡಿರುವುದರಿಂದ, ದೇಶದ ಮಾರುಕಟ್ಟೆಯಲ್ಲಿ ‘ಯುರೋಪ್ ವೈನ್’ ಬೆಲೆಯಲ್ಲಿ ಇಳಿಕೆಯಾಗಲಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
‘ನಾವು ಏನೇ ಹೇಳಿದರೂ ದ್ವೇಷ ಭಾಷಣದ ರೀತಿ ಕಾಣುತ್ತದೆ. ಅದಕ್ಕೂ ಒಂದು ಕಾಯ್ದೆ ತರುತ್ತಿದ್ದಾರೆ’ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ ಹೇಳುವ ಮೂಲಕ ದ್ವೇಷ ಭಾಷಣ ಕಾಯ್ದೆ ಜಾರಿಗೆ ವಿರೋಧ ವ್ಯಕ್ತಪಡಿಸಿದರು.
ವಿಬಿ ಜಿ ರಾಮ್ ಜೀ ಯೋಜನೆ ಕಾಯ್ದೆ ಹಿಂಪಡೆಯಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಗರದ ಸ್ವಾತಂತ್ರ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿತು.
ಜಂಟಿ ಅಧಿವೇಶನಕ್ಕಾಗಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಭಾಷಣದಲ್ಲಿ ರಾಜ್ಯಪಾಲರು ಓದಲು ಯೋಗ್ಯವಲ್ಲದ ಹಾಗೂ ಕೇಂದ್ರ ಸರ್ಕಾರವನ್ನು ಟೀಕಿಸುವಂತಹ ಅಂಶಗಳಿದ್ದವು. ಅವುಗಳನ್ನೂ ಓದಬೇಕು ಎನ್ನುವುದು ಖಂಡನೀಯ. ರಾಜ್ಯಪಾಲರು ಭಾಷಣ ಮಾಡುವುದು ಅವರ ವಿವೇಚನಾ ಅಧಿಕಾರಕ್ಕೆ ಬಿಟ್ಟಿದ್ದು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.