
ರಾಜ್ಯ, ದೇಶ, ವಿದೇಶದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
‘ಇರಾನ್ ಮೇಲೆ ಅಮೆರಿಕ ಏನಾದರೂ ದಾಳಿ ನಡೆಸಿದರೆ, ಅಮೆರಿಕ ಸೇನಾ ನೆಲೆಗಳು ಮತ್ತು ಇಸ್ರೇಲ್ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳ ಬೇಕಾಗುತ್ತದೆ’ ಎಂದು ಇರಾನ್ ದೇಶವು ಅಮೆರಿಕಕ್ಕೆ ಎಚ್ಚರಿಕೆ ನೀಡಿದೆ.
‘ನರೇಗಾ ವಿಚಾರವಾಗಿ ವಿರೋಧ ಪಕ್ಷಗಳ ಜತೆ ಯಾವ ವೇದಿಕೆಯಲ್ಲಾದರೂ ಚರ್ಚೆಗೆ ಸಿದ್ಧ. ಯಾವಾಗ ಕರೆದರೂ ಹೋಗುತ್ತೇನೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಪಶ್ಚಿಮಘಟ್ಟದ ಜೀವನಾಡಿಗಳಾದ ಬೇಡ್ತಿ-ವರದಾ ಹಾಗೂ ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆ ಕೈಬಿಡಲು ಆಗ್ರಹಿಸಿ ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನೇತೃತ್ವದಲ್ಲಿ ಸಮಾವೇಶ ನಡೆಯಿತು.
ಭೂ ಸರ್ವೇಕ್ಷಣಾ ಉಪಗ್ರಹ ಮತ್ತು ಇತರ 14 ಉಪಗ್ರಹಗಳನ್ನು ಹೊತ್ತ ಪಿಎಸ್‌ಎಲ್‌ವಿ–ಸಿ62 ರಾಕೆಟ್ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದೆ.
ಪತಿಯೊಂದಿಗೆ ಜಗಳ ಮಾಡಿಕೊಂಡು ಹುಬ್ಬಳ್ಳಿಗೆ ಬಂದಿದ್ದ 32 ವರ್ಷದ ಮಹಿಳೆಯನ್ನು ಆಟೊದಲ್ಲಿ ಅಪಹರಿಸಿ, ಅವರಿಗೆ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಸುಮಾರು 18 ವರ್ಷಗಳಿಂದ ನನೆಗುದಿಯಲ್ಲಿದ್ದ 1,600 ಮೆಗಾವಾಟ್ ಸಾಮರ್ಥ್ಯದ ಗೋದ್ನಾ ಶಾಖೋತ್ಪನ್ನ ವಿದ್ಯುತ್ ಯೋಜನೆಯನ್ನು ಜಿಂದಾಲ್ ಸೌತ್ ವೆಸ್ಟ್ ಎನರ್ಜಿ ಕಂಪನಿ ಕೈಗೆತ್ತಿಕೊಳ್ಳಲಿದೆ. ಇದಕ್ಕೆ ಸಂಬಂಧಿಸಿದಂತೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಸದ್ಯದಲ್ಲೇ ಒಪ್ಪಂದ ಮಾಡಿಕೊಳ್ಳಲಿದೆ.
ಅಸ್ತಮಾ ಕಾಯಿಲೆಗೆ ಚಿಕಿತ್ಸೆ ಪಡೆಯಲು ಇಲ್ಲಿನ ಶ್ರೀ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಭಾನುವಾರ ಮನೆಗೆ ತೆರಳಿದ್ದಾರೆ.
ಆಂಧ್ರಪ್ರದೇಶದಲ್ಲಿ ಬೆಂಗಳೂರು–ಕಡಪ–ವಿಜಯವಾಡ ಆರ್ಥಿಕ ಕಾರಿಡಾರ್ (ಎನ್‌ಎಚ್–544ಜಿ) ನಿರ್ಮಾಣದ ವೇಳೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ನಾಲ್ಕು ಗಿನ್ನೆಸ್ ವಿಶ್ವ ದಾಖಲೆಗಳನ್ನು ನಿರ್ಮಿಸಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಪ್ರಕಟಿಸಿದ್ದಾರೆ.
ಹಿಂದಿಯ ಪ್ರಮುಖ ರಿಯಾಲಿಟಿ ಶೋ ಇಂಡಿಯನ್ ಐಡಲ್‌ನ 3ನೇ ಆವೃತಿಯಲ್ಲಿ ಗೆದ್ದು ಮನೆಮಾತಾಗಿದ್ದ ಗಾಯಕ ಹಾಗೂ ನಟ ಪ್ರಶಾಂತ್ ತಮಾಂಗ್ ಭಾನುವಾರ ನವದೆಹಲಿಯ ತಮ್ಮ ನಿವಾಸದಲ್ಲಿ ನಿಧನರಾದರು. 43 ವರ್ಷದ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಚೇಸಿಂಗ್ ಮಾಸ್ಟರ್ ವಿರಾಟ್ ಕೊಹ್ಲಿ ಮತ್ತೊಮ್ಮೆ ಮಿಂಚಿದರು. ಕೇವಲ ಏಳು ರನ್‌ಗಳ ಅಂತರದಿಂದ ಶತಕ ಕೈತಪ್ಪಿಸಿಕೊಂಡರೂ ಭಾರತ ತಂಡವು ನ್ಯೂಜಿಲೆಂಡ್ ಎದುರಿನ ಮೊದಲ ಏಕದಿನ ಪಂದ್ಯದಲ್ಲಿ ಜಯ ಗಳಿಸಲು ಪ್ರಮುಖ ಕಾರಣರಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.