ADVERTISEMENT

26 ಫೆಬ್ರುವರಿ 2026: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಫೆಬ್ರುವರಿ 2026, 15:41 IST
Last Updated 26 ಫೆಬ್ರುವರಿ 2026, 15:41 IST
<div class="paragraphs"><p>ಈ ದಿನದ ಪ್ರಮುಖ 10 ಸುದ್ದಿಗಳು</p></div>

ಈ ದಿನದ ಪ್ರಮುಖ 10 ಸುದ್ದಿಗಳು

   

ರಾಜ್ಯ, ರಾಷ್ಟ್ರೀಯ, ವಿದೇಶ, ಕ್ರೀಡೆಗೆ ಸಂಬಂಧಿಸಿದ ಈ ದಿನದ ಪ್ರಮುಖ ಸುದ್ದಿಗಳು ಇಲ್ಲಿವೆ....

ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಕುರಿತ ಅಧ್ಯಾಯ: ಕ್ಷಮೆ ಕೋರಿದ ಎನ್‌ಸಿಇಆರ್‌ಟಿ

ನವದೆಹಲಿ: 8ನೇ ತರಗತಿಯ ಸಮಾಜವಿಜ್ಞಾನ ಪಠ್ಯಪುಸ್ತಕದಲ್ಲಿ, ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಕುರಿತು ಅಧ್ಯಾಯವೊಂದನ್ನು ಪ್ರಕಟಿಸಿದ್ದಕ್ಕಾಗಿ ಎನ್‌ಸಿಇಆರ್‌ಟಿ ಬುಧವಾರ ಕ್ಷಮೆ ಕೋರಿದೆ. ‘ಪಠ್ಯಪುಸ್ತಕಗಳ ಪರಿಶೀಲನಾ ಕಾರ್ಯ ನಿರಂತರವಾಗಿ ನಡೆಯುತ್ತಿರುತ್ತದೆ. ಈ ವಿಚಾರದಲ್ಲಿ ರಚನಾತ್ಮಕ ಪ್ರತಿಕ್ರಿಯೆಗಳನ್ನು ಎನ್‌ಸಿಇಆರ್‌ಟಿ ಮುಕ್ತವಾಗಿ ಸ್ವಾಗತಿಸುತ್ತದೆ. ವ್ಯಾಪಕ ಸಮಾಲೋಚನೆಗಳ ಬಳಿಕ ಪಠ್ಯಪುಸ್ತಕವನ್ನು ಮರುರಚಿಸಿ, 2026–27ನೇ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳಿಗೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದೆ.

ADVERTISEMENT

ಎಸ್‌ಟಿಆರ್‌ಆರ್ ಜಮೀನು ಕಳೆದುಕೊಂಡವರಿಗೆ ಪರಿಹಾರ: ಪ್ರಸ್ತಾವ ಕೇಂದ್ರ ಸಂಪುಟಕ್ಕೆ

ನವದೆಹಲಿ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಉಪನಗರ ವರ್ತುಲ ರಸ್ತೆ (ಎಸ್‌ಟಿಆರ್‌ಆರ್‌) ಯೋಜನೆಯನ್ನು ಅನುಷ್ಠಾನಗೊಳಿಸುವ ಹಾಗೂ ಜಮೀನು ಕಳೆದುಕೊಂಡಿರುವ ರೈತರಿಗೆ ತ್ವರಿತವಾಗಿ ಪರಿಹಾರ ನೀಡುವ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಶೀಘ್ರ ಅನುಮೋದನೆ ನೀಡುವ ಸಾಧ್ಯತೆ ಇದೆ.  

ಕರ್ತವ್ಯದ ಅವಧಿಯಲ್ಲಿ ಗೈರಾಗಿ ಸಾಮೂಹಿಕ ಮುಷ್ಕರ ಕೈಗೊಂಡರೆ ಕ್ರಮ: ಆರೋಗ್ಯ ಇಲಾಖೆ

ಬೆಂಗಳೂರು: ‘ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ಕರ್ತವ್ಯದ ಅವಧಿಯಲ್ಲಿ ಗೈರಾಗಿ ಸಾಮೂಹಿಕ ಮುಷ್ಕರ ಕೈಗೊಂಡಲ್ಲಿ ಕಾನೂನಿನ ಅಡಿ ಕ್ರಮ ಕೈಗೊಳ್ಳಲಾಗುವುದು’ ಎಂದು ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. 

ವ್ಯಾಪಾರ ಒಪ್ಪಂದ: ಪೀಯೂಷ್ ಗೋಯಲ್–ಹೊವಾರ್ಡ್‌ ಲುಟ್ನಿಕ್ ಭೇಟಿ

ನವದೆಹಲಿ: ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್‌ ಲುಟ್ನಿಕ್ ಮತ್ತು ಭಾರತದಲ್ಲಿನ ಅಮೆರಿಕದ ರಾಯಭಾರಿ ಸರ್ಗಿಯೊ ಗೋರ್ ಅವರ ಜೊತೆ ಮಾತುಕತೆ ನಡೆಸಿರುವುದಾಗಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಹೇಳಿದ್ದಾರೆ. 

ವಿಮಾನಯಾನ ಟಿಕೆಟ್ ಹಣ ಮರುಪಾವತಿ ನಿಯಮಗಳಲ್ಲಿ ಸಡಿಲ: ಆದರೆ ಷರತ್ತುಗಳು ಅನ್ವಯ

ಏರ್‌ ಇಂಡಿಯಾ ವಿಮಾನ

ನವದೆಹಲಿ: ವಿಮಾನ ಪ್ರಯಾಣಿಕರು ಇನ್ನು ಮುಂದೆ ಟಿಕೆಟ್ ಕಾಯ್ದಿರಿಸಿದ 48 ಗಂಟೆಗಳ ಒಳಗಾಗಿ ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ಟಿಕೆಟ್‌ಗಳನ್ನು ರದ್ದುಗೊಳಿಸಲು ಅಥವಾ ಬದಲಾವಣೆ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಶಾಸಕ ಸ್ಥಾನದಿಂದ ಅನರ್ಹ: ಸುಪ್ರೀಂ ಕೋರ್ಟ್‌ಗೆ ಸುಬ್ಬಾ ರೆಡ್ಡಿ ಮೇಲ್ಮನವಿ

ಸುಬ್ಬಾರೆಡ್ಡಿ

ನವದೆಹಲಿ: ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ (ಭಾಗ್ಯನಗರ) ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಕಾಂಗ್ರೆಸ್‌ನ ಎಸ್.ಎನ್. ಸುಬ್ಬಾರೆಡ್ಡಿ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. 

ನಮ್ಮ ಮೆಟ್ರೊ ಹಳದಿ ಮಾರ್ಗ: ಫೆ.27ರಿಂದ 8ನೇ ರೈಲು ಸಂಚಾರ

ಬೆಂಗಳೂರು: ನಮ್ಮ ಮೆಟ್ರೊ ಹಳದಿ ಮಾರ್ಗದಲ್ಲಿ ಫೆ.27ರಿಂದ 8ನೇ ರೈಲು ಸಂಚರಿಸಲಿದೆ. ಸದ್ಯ 10 ನಿಮಿಷಕ್ಕೊಂದು ರೈಲು ಸಂಚರಿಸುತ್ತಿದ್ದು, ಈ ಅವಧಿ 9 ನಿಮಿಷಕ್ಕೆ ಇಳಿಯಲಿದೆ.

ಹರಿಣಗಳ ಎದುರು ಮಂಡಿಯೂರಿದ ವಿಂಡೀಸ್: ಭಾರತದ ಸೆಮಿಫೈನಲ್ ಹಾದಿ ಸುಗಮ

ಅಧಿಕಾರಯುತ ಆಟ ಮುಂದುವರಿಸಿದ ದಕ್ಷಿಣ ಆಫ್ರಿಕಾ ತಂಡ ಟಿ20 ವಿಶ್ವಕಪ್ ಸೂಪರ್ ಎಂಟರ ಹಂತದ ಪಂದ್ಯದಲ್ಲಿ ಗುರುವಾರ 9 ವಿಕೆಟ್‌ಗಳಿಂದ ವೆಸ್ಟ್‌ ಇಂಡೀಸ್ ತಂಡವನ್ನು ಸದೆಬಡಿಯಿತು. ಸತತ ಎರಡನೇ ಗೆಲುವಿನಿಂದ ಹರಿಣಗಳ ಪಡೆ ಸೆಮಿಫೈನಲ್‌ ಸ್ಥಾನವನ್ನು ಹೆಚ್ಚುಕಮ್ಮಿ ಖಚಿಪಡಿಸಿಕೊಂಡಿತು.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಶ್ಮಿಕಾ ಮಂದಣ್ಣ–ವಿಜಯ್ ದೇವರಕೊಂಡ

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ‌ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು (ಫೆ.26) ಉದಯಪುದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಈ ಜನಪ್ರಿಯ ಜೋಡಿಯು ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆಯಾದರು.

ಉರ್ದು ಭಾಷೆಯ ಜಾಹೀರಾತು ಬಿಜೆಪಿ ಕೊಟ್ಟಿದ್ದೇಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಉರ್ದು ಭಾಷೆಯಲ್ಲಿ ಸರ್ಕಾರಿ ಜಾಹೀರಾತು ಕುರಿತು ವಿರೋಧ ಪಕ್ಷಗಳ ಟೀಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ನೀವು ಅಧಿಕಾರದಲ್ಲಿದ್ದಾಗಲೂ ಜಾಹೀರಾತು ನೀಡಿ ಈಗ ನಮ್ಮ ವಿರುದ್ಧ ಮುಗಿಬೀಳುವುದು ಅಸಹ್ಯ ಮತ್ತು ಆತ್ಮವಂಚನೆಯ ಪರಮಾವಧಿ’ ಎಂದು ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.