
ಮುಖ 10 ಸುದ್ದಿಗಳು
ರಾಷ್ಟ್ರೀಯ, ರಾಜ್ಯ, ವಾಣಿಜ್ಯ, ಕ್ರೀಡೆ ಸೇರಿದಂತೆ ಈ ದಿನದ ಪ್ರಮುಖ ಹತ್ತು ಸುದ್ದಿಗಳು ಇಲ್ಲಿವೆ.
ಕಾರವಾರ/ಸಿದ್ದಾಪುರ: ಸಿದ್ದಾಪುರ ತಾಲ್ಲೂಕಿನ ಅವರಗೊಪ್ಪ ಗ್ರಾಮದಲ್ಲಿ ಕೌಟುಂಬಿಕ ಕಲಹದಿಂದ ವಸಂತ ನಾಯ್ಕ (43) ಎಂಬುವವರ ಹತ್ಯೆ ನಡೆದಿದೆ. ಹತ್ಯೆ ಆರೋಪಿಗಳಾದ ಜ್ಯೋತಿಷಿ ಕಮಲಾಕರ ಭಟ್, ಸುಚಿತ್ರಾ ನಾಯ್ಕ ಸೇರಿ ಏಳು ಮಂದಿಯನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನವದೆಹಲಿ: ‘ನರೇಂದ್ರ ಮೋದಿ ಭಯಭೀತರಾಗಿದ್ದಾರೆ. ಅವರ ಮೇಲಿದ್ದ ಎರಡು ಒತ್ತಡಗಳಿಂದಾಗಿ ಭಾರತ ಹಾಗೂ ಅಮೆರಿಕ ಒಪ್ಪಂದಕ್ಕೆ ಸಹಿ ಮಾಡಿದ್ದಾರೆ’ ಎಂದು ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದರು.
ನವದೆಹಲಿ: ಭಾರತ ಮತ್ತು ಚೀನಾ ನಡುವಿನ ಲಡಾಖ್ ಬಿಕ್ಕಟ್ಟಿನ ಬಗ್ಗೆ ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಪ್ರಸ್ತಾಪಿಸಿದ ವಿಷಯ ಇಂದೂ (ಮಂಗಳವಾರ) ಸಹ ಭಾರಿ ಕೋಲಾಹಲಕ್ಕೆ ಕಾರಣವಾಯಿತು.
ನವದೆಹಲಿ: ಎನ್‌ಡಿಎ ವಿವಿಧ ಚುನಾವಣೆಗಳಲ್ಲಿ ನಿರಂತರ ಜಯ ಸಾಧಿಸುತ್ತಿರುವುದಕ್ಕೆ ಜನಪರ ನೀತಿಗಳು ಹಾಗೂ ಪರಿಶ್ರಮವೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ತಿಳಿಸಿದ್ದಾರೆ.
ನವದೆಹಲಿ: ದತ್ತಾಂಶ ಹಂಚಿಕೆ ಹೆಸರಿನಲ್ಲಿ ಪ್ರಜೆಗಳ ಖಾಸಗಿತನದ ಹಕ್ಕಿನೊಂದಿಗೆ ಆಟವಾಡಕೂಡದು ಎಂದು ಸುಪ್ರೀಂ ಕೋರ್ಟ್ ಕುಟುವಾಗಿ ನುಡಿದಿದೆ.
ಬೆಂಗಳೂರು: ‘ಮಾನ್ಯತೆ ಹೊಂದಿದ ವೀಸಾ, ಪಾಸ್‌ಪೋರ್ಟ್ ಇಲ್ಲದೆ ಅಕ್ರಮವಾಗಿ ನೆಲೆಸಿರುವ ವಿದೇಶಿಯರಿಂದ ದೇಶದ ಭದ್ರತೆಗೆ ಅಪಾಯ ಕಾದಿದೆ’ ಎಂದು ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ.
ನವದೆಹಲಿ: ಭಾರತ ಹಾಗೂ ಅಮೆರಿಕ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಘೋಷಣೆಯು ಜಾಗತಿಕವಾಗಿ ಆರ್ಥಿಕತೆಯ ಮೇಲೆ ಉಂಟಾಗಿದ್ದ ಅನಿಶ್ಚಿತತೆಯ ವಾತಾವರಣವನ್ನು ಕೊನೆಗೊಳಿಸಿದೆ. ಮಾತ್ರವಲ್ಲ, ಭಾರತೀಯ ಆರ್ಥಿಕತೆಗೆ ಸಕಾರಾತ್ಮಕ ಪರಿಣಾಮ ಬೀರಲಿದೆ ಎಂದು ಹಣಕಾಸು ಸಚಿವಾಲಯದ ಉನ್ನತ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಮಾಸ್ಕೊ: ತೈಲ ಖರೀದಿಸುವುದನ್ನು ನಿಲ್ಲಿಸುವ ಬಗ್ಗೆ ಭಾರತದಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ವಕ್ತಾರ ಡಿಮಿಟ್ರಿ ಪೆಸ್ಕೋವ್ ತಿಳಿಸಿದ್ದಾರೆ.
ವಡೋದರಾ: ಫೆಬ್ರುವರಿ 7ರಿಂದ ಆರಂಭವಾಗಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್‌ಗಳನ್ನು ಸೋಲಿಸುವುದು ಸುಲಭವಲ್ಲ ಎಂದು ಆಸ್ಟ್ರೇಲಿಯಾ ತಂಡದ ಮಾಜಿ ಕ್ರಿಕೆಟಿಗ ಹಾಗೂ ಗುಜರಾತ್ ಜೈಂಟ್ಸ್ ತಂಡದ ಕೋಚ್ ಮೈಕೆಲ್ ಕ್ಲಿಂಗರ್ ಹೇಳಿದ್ದಾರೆ.
ಪಟ್ನಾ: ಮಾಜಿ ಭೂಗತ ದೊರೆ, ಹಾಲಿ ಜೆಡಿ(ಯು) ಶಾಸಕ ಅನಂತ್ ಕುಮಾರ್ ಸಿಂಗ್ ಅವರನ್ನು ಬಿಹಾರ ವಿಧಾನಸಭೆಗೆ ಮಂಗಳವಾರ ಜೈಲು ವಾಹನದಲ್ಲೆ ಕರೆತರಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.