ADVERTISEMENT

2026ರ ಫೆಬ್ರುವರಿ 25: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಫೆಬ್ರುವರಿ 2026, 4:19 IST
Last Updated 25 ಫೆಬ್ರುವರಿ 2026, 4:19 IST
<div class="paragraphs"><p>ಈ ದಿನದ ಪ್ರಮುಖ 10 ಸುದ್ದಿಗಳು</p></div>

ಈ ದಿನದ ಪ್ರಮುಖ 10 ಸುದ್ದಿಗಳು

   

ರಾಷ್ಟ್ರೀಯ, ರಾಜ್ಯ, ವಿದೇಶ, ಸಿನಿಮಾ, ಕ್ರೀಡೆಗೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

ಧಾರವಾಡ | ನೇಮಕಾತಿಗಾಗಿ ಭುಗಿಲೆದ್ದ ಆಕ್ರೋಶ

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕೂಡಲೇ ಅಧಿಸೂಚನೆ ಪ್ರಕಟಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ (ಅಕ್ಸಾ) ನೇತೃತ್ವದಲ್ಲಿ ಮಂಗಳವಾರ ಧಾರವಾಡದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಉದ್ಯೋಗಾಕಾಂಕ್ಷಿಗಳು ಬೃಹತ್‌ ಪ್ರತಿಭಟನೆ ನಡೆಸಿದರು.

ADVERTISEMENT

ವಿಡಿಯೊ ಕಾನ್ಫರೆನ್ಸ್‌ನಲ್ಲಿ ವಿಚಾರಣೆ‌ಗೆ ಹಾಜರಾದ ನಟ ದರ್ಶನ್‌

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋ‍ಪಿಗಳಾದ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಇತರೆ ಆರೋಪಿಗಳು ವಿಡಿಯೊ ಕಾನ್ಫರೆನ್ಸ್ ಮೂಲಕ ಮಂಗಳವಾರ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು.

ಮೇಕೆದಾಟು: ಹೊಸ ಅಧ್ಯಯನಕ್ಕೆ ಕಾವೇರಿ ನೀರಾವರಿ ನಿಗಮ ತೀರ್ಮಾನ

ಮೇಕೆದಾಟು ಸಮತೋಲನ ಜಲಾಶಯ ಯೋಜನೆ ಕುರಿತು ಕೇಂದ್ರ ಜಲ ಆಯೋಗವು (ಸಿಡಬ್ಲ್ಯುಸಿ) ಕೆಲವೊಂದು ಅವಲೋಕನಗಳನ್ನು ಮಾಡಿರುವ ಹಿನ್ನೆಲೆಯಲ್ಲಿ ಹೊಸ ಅಧ್ಯಯನ ಹಾಗೂ ಸಮೀಕ್ಷೆ ನಡೆಸಲು ಕಾವೇರಿ ನೀರಾವರಿ ನಿಗಮವು ತೀರ್ಮಾನಿಸಿದೆ.

ದ್ವೇಷ ಭಾಷಣ: ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಪ್ರಕರಣ ದಾಖಲು

ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಗುರುಮಠಕಲ್‌ ಪೊಲೀಸ್‌ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.

ತಿರುಪತಿ ಲಡ್ಡಿನಲ್ಲಿ ಕಲಬೆರಕೆ ತುಪ್ಪ ಬಳಸಿರುವುದು ಸಂಘಟಿತ ಅಪರಾಧ: ನಾಯ್ಡು

‘ಹಿಂದಿನ ವೈಎಸ್‌ಆರ್‌ಸಿಪಿ ಅವಧಿಯಲ್ಲಿ ಸುಮಾರು 60 ಲಕ್ಷ ಕೆ.ಜಿಯಷ್ಟು ಕಲಬೆರಕೆ ತುಪ್ಪ ಬಳಸಿ 20 ಕೋಟಿಗಿಂತಲೂ ಹೆಚ್ಚಿನ ಲಡ್ಡು ಪ್ರಸಾದ ತಯಾರಿಸಲಾಗಿದ್ದು, ಇದೊಂದು ಸಂಘಟಿತ ಅಪರಾಧ’ ಎಂದು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು ಹೇಳಿದರು.

ಭಾರತದ ತಂತ್ರಜ್ಞಾನ ಉದ್ಯಮ: ₹28 ಲಕ್ಷ ಕೋಟಿ ವರಮಾನ ನಿರೀಕ್ಷೆ

‘ಪ್ರಸಕ್ತ ಆರ್ಥಿಕ ವರ್ಷದಲ್ಲಿ ದೇಶದ ತಂತ್ರಜ್ಞಾನ ಉದ್ಯಮವು ₹28.64 ಲಕ್ಷ ಕೋಟಿಯಷ್ಟು ವರಮಾನ ಕಾಣುವ ನಿರೀಕ್ಷೆ ಇದೆ’ ಎಂದು ಐ.ಟಿ ಉದ್ಯಮಗಳ ಸಂಘಟನೆ ನಾಸ್ಕಾಂ ತಿಳಿಸಿದೆ. ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ತಂತ್ರಜ್ಞಾನ ಉದ್ಯಮ ವಲಯವು ₹27 ಲಕ್ಷ ಕೋಟಿಯಷ್ಟು ವರಮಾನ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಶೇ 6.1ರಷ್ಟು ಬೆಳವಣಿಗೆ ಆಗಬಹುದು ಎಂದು ನಾಸ್ಕಾಂ ಅಂದಾಜು ಮಾಡಿದೆ.

‘ಸುಪ್ರೀಂ’ ತೀರ್ಪನ್ನು ಇಟ್ಟುಕೊಂಡು ಆಟವಾಡಿದರೆ ಮತ್ತಷ್ಟು ಸುಂಕ: ಟ್ರಂಪ್ ಬೆದರಿಕೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜಾಗತಿಕವಾಗಿ ವಿಧಿಸಿದ್ದ ಸುಂಕ ಕಾನೂನುಬಾಹಿರ ಎಂದು ಹೇಳಿ ಸುಪ್ರೀಂ ಕೋರ್ಟ್ ಅದನ್ನು ರದ್ದುಪಡಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಟ್ರಂಪ್ ಹೊಸ ಬೆದರಿಕೆ ಹಾಕಿದ್ದಾರೆ.

ಉಗ್ರ ರಾಣಾ ಪೌರತ್ವ ರದ್ದು ಮಾಡಲು ಮುಂದಾದ ಕೆನಡಾ: ವರದಿ

2008ರಲ್ಲಿ ಮುಂಬೈನಲ್ಲಿ ಸಂಭವಿಸಿದ್ದ ಭಯೋತ್ಪಾದಕ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆರೋಪ ಎದುರಿಸುತ್ತಿರುವ ತಹವ್ವುರ್ ರಾಣಾ ಹುಸೇನ್‌ ಪೌರತ್ವ ರದ್ದುಪಡಿಸುವುದಕ್ಕೆ ಕೆನಡಾ ಸರ್ಕಾರ ಮುಂದಾಗಿದೆ.

ರಷ್ಯಾ–ಉಕ್ರೇನ್‌ ಯುದ್ಧಕ್ಕೆ 4 ವರ್ಷ: ಪುಟಿನ್‌ ಗೆದ್ದಿಲ್ಲ ಎಂದ ಝೆಲೆನ್‌ಸ್ಕಿ

ಉಕ್ರೇನ್‌ –ರಷ್ಯಾ ನಡುವಿನ ಯುದ್ಧ ಆರಂಭಗೊಂಡು ನಾಲ್ಕು ವರ್ಷಗಳು ಕಳೆದ ಹಿನ್ನೆಲೆಯಲ್ಲಿ ಮಾತನಾಡಿರುವ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ, ‘ಪುಟಿನ್‌ ಈ ಯುದ್ಧದಲ್ಲಿ ಗೆದ್ದಿಲ್ಲ ಮತ್ತು ಉಕ್ರೇನ್‌ ನಾಗರಿಕರ ಆತ್ಮವಿಶ್ವಾಸವನ್ನು ಕುಗ್ಗಿಸಿಲ್ಲ. ಯುದ್ಧ ಆರಂಭವಾದಾಗಿನಿಂದ ಈವರೆಗೆ ನಾವು ನಮ್ಮ ಸ್ವಾತಂತ್ರ್ಯವನ್ನು, ರಾಷ್ಟ್ರ ಸ್ಥಾನಮಾನವನ್ನು ಬಿಟ್ಟುಕೊಟ್ಟಿಲ್ಲ’ ಎಂದಿದ್ದಾರೆ.

T20 World Cup: ಶ್ರೀಲಂಕಾಕ್ಕೆ ಮಾಡು–ಮಡಿ ಪಂದ್ಯ

ಆತಿಥೇಯ ಶ್ರೀಲಂಕಾ ತಂಡದ ಪಾಲಿಗೆ ಬುಧವಾರ ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಟಿ20 ವಿಶ್ವಕಪ್ ಸೂಪರ್ ಎಂಟರ ಹಂತದ ಪಂದ್ಯ ಮಾಡು– ಮಡಿ ರೀತಿಯಲ್ಲಿದೆ. ಮಳೆಯ ಸಾಧ್ಯತೆಯಿಲ್ಲದ ಕಾರಣ ಎರಡೂ ತಂಡಗಳು ಈ ಹಂತದಲ್ಲಿ ಮೊದಲ ಗೆಲುವಿನಯತ್ನದಲ್ಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.