
ಈ ದಿನದ ಪ್ರಮುಖ 10 ಸುದ್ದಿಗಳು
ರಾಷ್ಟ್ರೀಯ, ರಾಜ್ಯ, ವಿದೇಶ, ಸಿನಿಮಾ, ಕ್ರೀಡೆಗೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
ನವದೆಹಲಿ: ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಸರಕುಗಳ ಮೇಲೆ ಅಮೆರಿಕ ವಿಧಿಸಿರುವ ಶೇ 10ರಷ್ಟು ಹೆಚ್ಚುವರಿ ಸುಂಕವು ಮಂಗಳವಾರದಿಂದ ಜಾರಿಗೆ ಬರಲಿದೆ. ಈ ಆದೇಶವು 150 ದಿನಗಳವರೆಗೆ ಜಾರಿಯಲ್ಲಿ ಇರಲಿದೆ.
ನವದೆಹಲಿ: ಭಯೋತ್ಪಾದಕ ಚಟುವಟಿಕೆಗಳನ್ನು ಹತ್ತಿಕ್ಕಲು ಮತ್ತು ಉಗ್ರರ ದಾಳಿಗೆ ತಕ್ಕ ಪ್ರತಿಕ್ರಿಯೆ ನೀಡುವ ಕಾರ್ಯತಂತ್ರ ಒಳಗೊಂಡ ದೇಶದ ಮೊತ್ತಮೊದಲ ಭಯೋತ್ಪಾದಕ ನಿಗ್ರಹ ನೀತಿ ‘ಪ್ರಹಾರ್’ ಅನ್ನು ಕೇಂದ್ರ ಗೃಹ ಸಚಿವಾಲಯ ಸೋಮವಾರ ಅನಾವರಣಗೊಳಿಸಿದೆ.
ಸಹರಾನ್‌ಪುರ (ಉತ್ತರಪ್ರದೇಶ): 10 ವರ್ಷಗಳ ಹಿಂದೆ ಭೂ ವಿವಾದ ಸಂಬಂಧ ಇಬ್ಬರು ಸಹೋದರರನ್ನು ಹತ್ಯೆ ಮಾಡಿದ ಆರೋಪದ ಮೇಲೆ ಸ್ಥಳೀಯ ನ್ಯಾಯಾಲಯವು ಒಂದೇ ಕುಟುಂಬದ 13 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
ವಾರಾಣಸಿ, ಉತ್ತರಪ್ರದೇಶ: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದಲ್ಲಿ ಪೊಲೀಸರು ತನ್ನನ್ನು ಬಂಧಿಸಲು ಬಂದರೆ ನಾನು ವಿರೋಧಿಸುವುದಿಲ್ಲ ಎಂದು ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿದ್ದಾರೆ.
ಬೆಂಗಳೂರು: ‘ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ದಲಿತತ್ವ ಇಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೆಸರು ಹೇಳುತ್ತಾರೆಯೇ ಹೊರತು ದಲಿತತ್ವ ಅವರ ಕುಟುಂಬದಲ್ಲಿ ಇಲ್ಲ’ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಕ್ಕೆ ಪ್ರಿಯಾಂಕ್ ಅವರು ತಿರುಗೇಟು ನೀಡಿದ್ದಾರೆ.
ಕೊಪ್ಪಳ: ಪರಿಸರಕ್ಕೆ ಮಾಲಿನ್ಯ ಉಂಟು ಮಾಡುತ್ತಿರುವ ಕಾರ್ಖಾನೆಗಳ ವಿಸ್ತರಣೆ ವಿರೋಧಿಸಿ ಜಿಲ್ಲಾ ಬಚಾವೊ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ಜಂಟಿ ಕ್ರಿಯಾವೇದಿಕೆ ಮಂಗಳವಾರ ಕೊಪ್ಪಳ ಹಾಗೂ ಭಾಗ್ಯನಗರ ಬಂದ್ ಕರೆ ನೀಡಿದ್ದು ಅಂಗಡಿಗಳು ಮುಚ್ಚಿದ್ದವು.
ನವದೆಹಲಿ: ವಿಮೆ ಸೇರಿದಂತೆ ವಿವಿಧ ಹಣಕಾಸಿನ ಉತ್ಪನ್ನಗಳನ್ನು ಅಗತ್ಯ ಇಲ್ಲದವರಿಗೂ ಮಾರಾಟ ಮಾಡುವ ಬ್ಯಾಂಕ್‌ಗಳ ವಿರುದ್ಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಚಾಟಿ ಬೀಸಿದರು. ಬ್ಯಾಂಕ್‌ಗಳು ತಮ್ಮ ಮೂಲ ಕೆಲಸದ ಮೇಲೆ ಗಮನ ನೀಡಬೇಕು ಎಂದು ಹೇಳಿದರು.
ಬ್ರಿಸ್ಬೇನ್: ಆಸ್ಟ್ರೇಲಿಯಾ ನೆಲದಲ್ಲಿ ಮೊದಲ ಬಾರಿ ಟಿ20 ಸರಣಿಯನ್ನು ಗೆದ್ದು ಆತ್ಮವಿಶ್ವಾಸದಲ್ಲಿರುವ ಭಾರತ ವನಿತೆಯರ ತಂಡವು ಮಂಗಳವಾರ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ತಂಡವನ್ನು ಎದುರಿಸಲಿದೆ.
ಅಹಮದಾಬಾದ್: ಗುಜರಾತ್‌ನ ಉದಯೋನ್ಮುಖ ಜುಡೊ ಆಟಗಾರ ರೋಹಿತ್ ಮಜಗುಲ್ ಅವರು ವರ್ಷಾಂತ್ಯದಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಗೇಮ್ಸ್ ಹಾಗೂ ಏಷ್ಯನ್ ಗೇಮ್ಸ್‌ಗೆ ಅರ್ಹತೆ ಪಡೆದಿದ್ದಾರೆ.
ಮುಂಬೈ: ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ ಭಾರತೀಯ ಷೇರು ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಶೇ 1 ರಷ್ಟು ಕುಸಿತ ಕಂಡವು. ಎಐ ಬೆಳವಣಿಗೆ ಆತಂಕಗಳ ನಡುವೆ ಐಟಿ ಷೇರುಗಳಲ್ಲಿ ತೀವ್ರ ಮಾರಾಟ ಕುಸಿತಕ್ಕೆ ಕಾರಣವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.