
ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

ಸಿದ್ದರಾಮಯ್ಯ
‘ಚುನಾವಣೆ ಆಯೋಗವು ನಡೆಸುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಪಕ್ಷವು ರಾಜಕೀಯ ಮಾಡುವುದಿಲ್ಲ. ಆದರೆ, ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯಬಾರದು ಎಂಬುದಷ್ಟೇ ನಮ್ಮ ಕಾಳಜಿ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರಾಜ್ಯದ ಸರ್ಕಾರಿ ಸ್ವಾಮ್ಯದ ಏಕೈಕ ಸಕ್ಕರೆ ಕಾರ್ಖಾನೆಯಾದ ‘ಮೈಸೂರು ಷುಗರ್ ಕಂಪನಿ’ಯಲ್ಲಿ (ಮೈಷುಗರ್) ಅವ್ಯವಹಾರ ಮತ್ತು ಅಕ್ರಮ ನೇಮಕಾತಿಗಳ ಆರೋಪಗಳ ಸಮಗ್ರ ತನಿಖೆಗೆ ಮಹಾರಾಷ್ಟ್ರದ ನಿವೃತ್ತ ಸಕ್ಕರೆ ಆಯುಕ್ತ ಶೇಖರ್ ಗಾಯಕವಾಡ ಅಧ್ಯಕ್ಷತೆಯಲ್ಲಿ ರಾಜ್ಯ ಸರ್ಕಾರ ತನಿಖಾ ಸಮಿತಿ ರಚಿಸಿದೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಇ–ಮೇಲ್‌ಗಳನ್ನು ಹ್ಯಾಕ್ ಮಾಡಿ ಕೋಟ್ಯಂತರ ರೂಪಾಯಿ ದೋಚುವ ಜಾಲವನ್ನು ಬೇಧಿಸಿರುವ ನಗರದ ಸೈಬರ್ ಕ್ರೈಂ ಪೊಲೀಸರು, ಸೈಬರ್ ವಂಚಕರ ಕೈ ಸೇರಿದ್ದ ₹2.16 ಕೋಟಿಯನ್ನು ‘ಗೋಲ್ಡನ್ ಅವರ್’ನಲ್ಲಿ (ಕೃತ್ಯ ನಡೆದ ಒಂದು ತಾಸಿನ ಒಳಗಾಗಿ) ಮುಟ್ಟುಗೋಲು ಹಾಕಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
‘ಯಾರು ಏನೇ ಅಂದರೂ ಹಣೆಬರಹದಲ್ಲಿ ಏನು ಬರೆದಿದೆಯೋ, ಅದೇ ಆಗುತ್ತದೆ. ನಾನೂ ಅದನ್ನು ನಂಬುತ್ತೇನೆ’ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.
ಲಕ್ಕುಂಡಿ ಗ್ರಾಮದಲ್ಲಿನಡೆದಿರುವ ಉತ್ಖನನದಲ್ಲಿ ಮಂಗಳವಾರ ನವ ಶಿಲಾಯುಗದ ಬೂದು ಬಣ್ಣದ ಮಡಿಕೆ ಮತ್ತು ಜಿನ ಚಿತ್ರವಿರುವ ಕಲ್ಲಿನ ಪೀಠ ಸಿಕ್ಕಿದೆ.
ಬೆಂಗಳೂರು: ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ಸಿಸಿಬಿ ಕೇಂದ್ರ ಅಪರಾಧ ದಳದ ಆ್ಯಂಟಿ–ನಾರ್ಕೋಟಿಕ್ಸ್ ಘಟಕದ ತಂಡವು ಕಾರ್ಯಾಚರಣೆ ನಡೆಸಿ ಬಂಧಿಸಿದೆ.
ಟಾಟಾ ಮೋಟಾರ್ಸ್ ಕಂಪನಿಯು ವಿದ್ಯುತ್ ಚಾಲಿತ (ಇ.ವಿ) ಟ್ರಕ್‌ಗಳೂ ಸೇರಿದಂತೆ ಬೃಹತ್ ಪ್ರಮಾಣದಲ್ಲಿ ಸರಕು ಸಾಗಿಸುವ 17 ಹೊಸ ಟ್ರಕ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.
ಮುಂಬೈ–ಎಸ್‌ಎಂವಿಟಿ ಬೆಂಗಳೂರು ನಡುವೆ ವಾರಕ್ಕೆ ಎರಡು ದಿನ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ರೈಲ್ವೆ ಮಂಡಳಿ ಅನುಮತಿ ನೀಡಿ ತಿಂಗಳು ಕಳೆದರೂ ಇನ್ನೂ ಸಂಚಾರ ಆರಂಭವಾಗಿಲ್ಲ. ಈ ನಡುವೆ ಹೊಸ ತುರಂತೊ ರೈಲು ಸಂಚರಿಸಲಿದೆ ಎಂಬ ಸುದ್ದಿ ಹರಡಿದೆ. ಅಂಥ ಯಾವುದೇ ನಿರ್ಧಾರವಾಗಿಲ್ಲ ಎಂದು ರೈಲ್ವೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
‘ಸರ್ಕಾರಿ ವೈದ್ಯರು ಕೆಲಸದ ಅವಧಿಯಲ್ಲಿ ಖಾಸಗಿ ಕ್ಲಿನಿಕ್ ಅಥವಾ ಬೇರೆ ಕಡೆ ಕೆಲಸ ಮಾಡದಂತೆ ತಡೆಯಲು ನಿಗಾ ವ್ಯವಸ್ಥೆ ರೂಪಿಸಿದ್ದು, ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ.
ನಾಯಕ ಸೂರ್ಯಕುಮಾರ್ ಯಾದವ್ ಅವರೀಗ ಒತ್ತಡದಲ್ಲಿದ್ದಾರೆ. ಏಕೆಂದರೆ; ನ್ಯೂಜಿಲೆಂಡ್ ಎದುರು ಬುಧವಾರ ಆರಂಭವಾಗಲಿರುವ ಟಿ20 ಕ್ರಿಕೆಟ್ ಸರಣಿಯಲ್ಲಿ ಅವರಿಗೆ ಎರಡು ಪ್ರಮುಖ ಸವಾಲುಗಳಿವೆ.