
ಈ ದಿನದ ಪ್ರಮುಖ 10 ಸುದ್ದಿಗಳು
ರಾಜ್ಯ, ದೇಶ, ವಿದೇಶಕ್ಕೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ಮತ್ತು ಮತದಾನವು ಮಾರ್ಚ್ 9 ರಂದು ನಡೆಯಲಿದೆ. ವಿರಾಮದ ಬಳಿಕ ಸಂಸತ್ತಿನ ಅಧಿವೇಶನ ಪುನರಾರಂಭಗೊಂಡ ದಿನವೇ (ಮಾರ್ಚ್ 9) ಇದನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಭಾನುವಾರ ತಿಳಿಸಿದ್ದಾರೆ.
ಟಿ20 ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಭಾರತದ ವಿರುದ್ಧ ಟಾಸ್ ಗೆದ್ದಿರುವ ಪಾಕಿಸ್ತಾನ, ಬೌಲಿಂಗ್ ಆಯ್ದುಕೊಂಡಿದೆ. ಕೊಲೊಂಬೊದ ಆರ್. ಪ್ರೇಮದಾಸ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವಭಾರತ ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿದೆ.
ನೆಲಮಂಗಲ ಹೆದ್ದಾರಿಯಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತುಮಕೂರಿನಿಂದ ಬರುತ್ತಿದ್ದ ಇಂಡಿಕಾ ಕಾರು, ನೆಲಮಂಗಲ ಹೆದ್ದಾರಿಯಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಎದುರು ದಿಕ್ಕಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಬಸ್‌ನ ಮುಂಭಾಗಕ್ಕೂ ತೀವ್ರ ಹಾನಿಯಾಗಿದೆ.
ಬಾಂಗ್ಲಾದೇಶದ ಮುಂದಿನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣವಚನ ಸ್ವೀಕರಿಸಲಿರುವ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಲಾಗಿದೆ.
ಮಹಾಶಿವರಾತ್ರಿಯ ಅಂಗವಾಗಿ ನಡೆಯುತ್ತಿರುವ ಮಾಘ ಮೇಳದ ಕೊನೆಯ ದಿನವಾದ ಭಾನುವಾರ ಬೆಳಿಗ್ಗೆ 10 ಗಂಟೆಯ ಒಳಗೆ ಸುಮಾರು 21 ಲಕ್ಷ ಭಕ್ತರು ಗಂಗಾ ನದಿ ಮತ್ತು ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
'ವೈಟ್ ಕಾಲರ್' ಭಯೋತ್ಪಾದನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ವೈದ್ಯರು, ಜಮ್ಮು ಮತ್ತು ಕಾಶ್ಮೀರ ಹಾಗೂ ದೇಶದಾದ್ಯಂತ ಉಗ್ರ ಕೃತ್ಯಗಳನ್ನು ಸಂಘಟಿಸಲು ಹೊಸ ಗುಂಪು ರಚಿಸಿಕೊಂಡಿದ್ದರು ಎಂಬುದು ತಿಳಿದು ಬಂದಿದೆ.
ಭಾರತ–ಅಮೆರಿಕ ವ್ಯಾಪರ ಒಪ್ಪಂದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ರಾಹುಲ್ ಗಾಂಧಿ ಅವರು, ಇದೀಗ ಮತ್ತೊಮ್ಮೆ ಕಿಡಿಕಾರಿದ್ದಾರೆ.
ಹನೂರು ತಾಲ್ಲೂಕಿನ ಗುಂಡಾಲ್ ಜಲಾಶಯದ ಹಿನ್ನೀರಿನಲ್ಲಿ ಭಾನುವಾರ 3 ವರ್ಷದ ಗಂಡು ಹುಲಿಯ ಕಳೆಬರ ಪತ್ತೆಯಾಗಿದೆ. ಹುಲಿಯ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಅಮಾಯಕರ ಬ್ಯಾಂಕ್ ಖಾತೆಗಳನ್ನು ಅಕ್ರಮವಾಗಿ ಬಳಸಿಕೊಂಡು (ಮ್ಯೂಲ್ ಅಕೌಂಟ್) ಭಯೋತ್ಪಾದನೆ, ದೇಶವಿರೋಧಿ ಚಟುವಟಿಕೆಗಳಿಗೆ ಹಣವನ್ನು ವರ್ಗಾಯಿಸುತ್ತಿದ್ದ ಅತ್ಯಂತ ವ್ಯವಸ್ಥಿತ, ಅತ್ಯಾಧುನಿಕ ಸೈಬರ್ ವಂಚಕರ ಜಾಲವನ್ನು ಕೇಂದ್ರ ತನಿಖಾ ಸಂಸ್ಥೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭೇದಿಸಿದೆ.
ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ಉತ್ತರಾಖಂಡ ತಂಡಗಳು ಮುಖಾಮುಖಿಯಾಗಿವೆ. ಮೊದಲ ದಿನದಾಟದಲ್ಲಿ ಕೆ.ಎಲ್ ರಾಹುಲ್ ಹಾಗೂ ನಾಯಕ ದೇವದತ್ತ ಪಡಿಕ್ಕಲ್ ಅವರ ಶತಕಗಳ ನೆರವಿನಿಂದ ಕರ್ನಾಟಕ ತಂಡ 2 ವಿಕೆಟ್ ಕಳೆದುಕೊಂಡು 355 ರನ್ ಕಲೆಹಾಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.