
ರಾಜ್ಯ, ದೇಶ, ವಿದೇಶದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ
ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
ಕೇಂದ್ರ ಸರ್ಕಾರದ ಕುರಿತು ಆಕ್ಷೇಪಾರ್ಹ ಸಾಲುಗಳಿವೆ ಎಂಬ ಕಾರಣ ಮುಂದಿಟ್ಟು ಪೂರ್ಣ ಭಾಷಣ ಓದದ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರ ನಡೆಯ ವಿರುದ್ಧ ಸಿಡಿದ ಕಾಂಗ್ರೆಸ್ ಸದಸ್ಯರು ಅವರ ವಿರುದ್ಧ ಸದನದಲ್ಲೇ ಧಿಕ್ಕಾರ ಕೂಗಿದರು. ರಾಜ್ಯಪಾಲರ ಧೋರಣೆಯನ್ನು ಬಿಜೆಪಿ ಸದಸ್ಯರು ಬಲವಾಗಿ ಸಮರ್ಥಿಸಿಕೊಂಡರು.
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಉಭಯ ದೇಶಗಳ ನಾಯಕರು ದಕ್ಷಿಣ ಜಗತ್ತಿನ (ಗ್ಲೋಬಲ್ ಸೌತ್) ಹಿತಾಸಕ್ತಿಗಳನ್ನು ಕಾಪಾಡಲು ನಿಕಟ ಸಹಕಾರ ಅಗತ್ಯ ಎಂಬುದನ್ನು ಪ್ರತಿಪಾದಿಸಿದ್ದಾರೆ.
ಮಾಘಮೇಳದ ಅಂಗವಾಗಿ ವಸಂತ ಪಂಚಮಿ ದಿನವಾದ ಇಂದು (ಶುಕ್ರವಾರ) ತ್ರಿವೇಣಿ ಸಂಗಮದಲ್ಲಿ ಒಂದು ಕೋಟಿಗೂ ಅಧಿಕ ಭಕ್ತರು ಪುಣ್ಯ ಸ್ನಾನ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ಎಲ್ಲ ಮೂರು ಆಯಾಮಗಳಿಂದಲೂ ಸವಾಲುಗಳನ್ನು ಎದುರಿಸಲು ಸಿದ್ಧರಾಗಿದ್ದೆವು' ಎಂದು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ 2027ರ ಡಿ. 31ರವರೆಗೆ ಹೊರಡಿಸುವ ಅಧಿಸೂಚನೆಗಳಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು ಐದು ವರ್ಷಗಳಿಗೆ ಸಡಿಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಚಳಿಗಾಲದಲ್ಲಿ ಬ್ರಾಯ್ಲರ್ ಕೋಳಿ ಮಾಂಸಕ್ಕೆ ಬೇಡಿಕೆ ಹೆಚ್ಚಿದ್ದರೂ, ನಿರೀಕ್ಷಿತ ಮಟ್ಟದಲ್ಲಿ ಕೋಳಿಗಳ ಪೂರೈಕೆ ಆಗುತ್ತಿಲ್ಲ. ಹವಾಮಾನ ವೈಪರೀತ್ಯ ಸೇರಿ ಬೇರೆ ಬೇರೆ ಕಾರಣಗಳಿಂದ ಕೋಳಿ ಉತ್ಪಾದಕ ಕಂಪನಿಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕೋಳಿಗಳೂ ಇಲ್ಲ. ಪರಿಣಾಮವಾಗಿ ಕೋಳಿ ಮಾಂಸದ ದರ ದುಬಾರಿಯಾಗಿದೆ.
ಮರುಬಳಕೆ ಇಂಧನ ವಲಯದಲ್ಲಿ ಹೆಸರು ಮಾಡಿರುವ ಆರ್.ಪಿ.ಸಂಜೀವ್ ಗೊಯೆಂಕಾ ಉದ್ಯಮ ಸಮೂಹವು ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಮುಂದಿನ ಮೂರು ವರ್ಷಗಳಲ್ಲಿ ₹10,500 ಕೋಟಿ ಬಂಡವಾಳ ಹೂಡಿಕೆ ಮಾಡಲಿದೆ. ಇದಕ್ಕೆ ಸರ್ಕಾರದ ಕಡೆಯಿಂದ ಬೇಕಾದ ನೆರವು ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದರು.
ಕರಣ್ ಜೋಹರ್ ಮತ್ತು ಅದಾರ್ ಪೂನಾವಾಲಾ ನಿರ್ಮಿಸಿರುವ ‘ಹೋಮ್‌ಬೌಂಡ್’ ಹಿಂದಿ ಭಾಷಾ ಚಲನಚಿತ್ರವು ಈ ವರ್ಷದ ಆಸ್ಕರ್ ಪ್ರಶಸ್ತಿಯ ‘ಅತ್ಯುತ್ತಮ ಅಂತರರಾಷ್ಟ್ರೀಯ ಚಲನಚಿತ್ರ ವಿಭಾಗ’ದಲ್ಲಿ ನಾಮ ನಿರ್ದೇಶನ ಪಡೆಯುವಲ್ಲಿ ವಿಫಲವಾಗಿದೆ.
ಇರಾನ್‌ನಲ್ಲಿ ಈಚೆಗೆ ನಡೆದ ಪ್ರತಿಭಟನೆಯಲ್ಲಿ 3,117 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಇರಾನ್ ಸರ್ಕಾರ ಮೃತಪಟ್ಟವರ ಸಂಖ್ಯೆ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದು ಇದೇ ಮೊದಲು.
ಮಧ್ಯಪ್ರದೇಶದ ತಂಡದ ಬ್ಯಾಟರ್‌ಗಳು ಗುರುವಾರದ ಬಹುತೇಕ ಅವಧಿಯಲ್ಲಿ ಸಾಧಿಸಿದ್ದ ಹಿಡಿತವನ್ನು ಸಂಜೆಯ ಹೊತ್ತಿಗೆ ಸಡಿಲಗೊಳಿಸುವಲ್ಲಿ ಕರ್ನಾಟಕದ ಬೌಲರ್‌ಗಳು ಯಶಸ್ವಿಯಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.