

ಮೆಟ್ರೊ ಪ್ರಯಾಣ ದರ ಏರಿಕೆ ಸ್ಥಗಿತಗೊಳಿಸಿದ್ದು ರಾಜ್ಯ ಸರ್ಕಾರ, ಇದರಲ್ಲಿ ಕೇಂದ್ರ ಸರ್ಕಾರದ ಪಾತ್ರವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು. ಕಾರ್ಯಾಚರಣೆ ಹಾಗೂ ನಿರ್ವಹಣಾ ವೆಚ್ಚ, ಗ್ರಾಹಕ ಬೆಲೆ ಸೂಚ್ಯಂಕದನ್ವಯ ಈಗಿರುವ ದರ, ಇಂಧನ ವೆಚ್ಚ ಮುಂತಾವುಗಳನ್ನು ಪರಿಗಣನೆಗೆ ತೆಗೆದುಕೊಂಡು ಬಿಎಂಆರ್‌ಸಿಎಲ್ ದರ ಏರಿಕೆ ಮಾಡುತ್ತದೆ. ಪರಿಷ್ಕೃತ ದರದೊಂದಿಗೆ ಬನ್ನಿ ಎಂದು ನಾನು ಅವರಿಗೆ ಸೂಚಿಸಿದ್ದೇನೆ’ ಎಂದು ಅವರು ಹೇಳಿದರು.
ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಣೆಯವರ ಪುಸ್ತಕಕ್ಕೆ ಹೆದರಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪತಿ ಭಾಷಣಕ್ಕೆ ಮೇಲೆ ವಂದನಾ ನಿರ್ಣಯ ಸಲ್ಲಿಸಲು ಲೋಕಸಭೆಗೆ ಬರಲಿಲ್ಲ, ಸಂಸದರಿಗೆ ಹೆದರಿ ಅಲ್ಲ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಎನ್‌ಸಿಪಿ(ಎಸ್‌ಪಿ) ಮುಖ್ಯಸ್ಥ, ಪವಾರ್ ಕುಟುಂಬದ ಹಿರಿಯ ನಾಯಕ ಶರದ್ ಪವಾರ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಪುಣೆಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಶರದ್ ಪವಾರ್ ಅವರು ಪುಣೆಯ ರೂಬಿ ಕ್ಲಿನಿಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ಡಿಜಿಟಲ್ ಅರೆಸ್ಟ್ ಪ್ರಕರಣಗಳ ಸಂಬಂಧ ಸಕಾಲಿಕ ಕ್ರಮ ಕೈಗೊಳ್ಳುವಂತೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಮತ್ತು ಇತರ ಬ್ಯಾಂಕುಗಳಿಗೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ. ಡಿಜಿಟಲ್ ವಂಚನೆಗಳಿಂದ ₹54,000 ಕೋಟಿಗೂ ಹೆಚ್ಚು ಹಣವನ್ನು ದೋಚಿರುವುದನ್ನು ಸಂಪೂರ್ಣ ದರೋಡೆ ಅಥವಾ ಡಕಾಯಿತಿ ಪ್ರಕರಣ ಎಂದು ಕರೆದ ಸುಪ್ರೀಂ ಕೋರ್ಟ್, ಬ್ಯಾಂಕ್ ಅಧಿಕಾರಿಗಳ ಸಂಭಾವ್ಯ ಪಿತೂರಿ ಅಥವಾ ನಿರ್ಲಕ್ಷ್ಯದಿಂದ ಇಂತಹ ಘಟನೆಗಳು ಸಂಭವಿಸಿವೆ ಎಂದು ಹೇಳಿದೆ.
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ವಿರೋಧ ಪಕ್ಷಗಳು ಇಂದು (ಸೋಮವಾರ) ನಿರ್ಧರಿಸಿವೆ ಎಂದು ಮೂಲಗಳು ತಿಳಿಸಿವೆ. ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಸದನದಲ್ಲಿ ಮಾತನಾಡಲು ಅವಕಾಶ ನೀಡಿಲ್ಲ ಎಂಬ ಕಾರಣಕ್ಕೆ ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸುವ ಗೊತ್ತುವಳಿ ಮಂಡಿಸಲು ವಿರೋಧ ಪಕ್ಷಗಳು ಮುಂದಾಗಿವೆ ಎಂದು ವರದಿಯಾಗಿದೆ.
ವಿ.ಡಿ. ಸಾವರ್ಕರ್ ಅವರಿಗೆ ಭಾರತ ರತ್ನ ನೀಡಬೇಕೆಂಬ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಬೇಡಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ, ‘ಗಾಂಧಿಯನ್ನು ಹತ್ಯೆಗೈದ ಗೋಡ್ಸೆಗೂ ಒಂದು ದಿನ ಬಿಜೆಪಿ ಭಾರತ ರತ್ನ ಕೊಡಿಸುತ್ತದೆ’ ಎಂದಿದ್ದಾರೆ.
ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದಕ್ಕೆ ಒಪ್ಪಿಗೆ ಸೂಚಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
ಇರಾನ್‌ನ ಮಾನವ ಹಕ್ಕುಗಳ ಹೋರಾಟಗಾರ್ತಿ, ನೊಬೆಲ್ ಶಾಂತಿ ಪುರಸ್ಕೃತೆ ನರ್ಗಿಸ್ ಮೊಹಮ್ಮದಿ ಅವರಿಗೆ ಇರಾನ್ ನ್ಯಾಯಾಲಯವು ಆರು ವರ್ಷಗಳ ಕಾಲ ಶಿಕ್ಷೆ ವಿಧಿಸಿದೆ. ‘ಅಪರಾಧಗಳನ್ನು ಮಾಡಲು ಒಂದೆಡೆ ಸೇರಿ, ಒಳಸಂಚು ರೂಪಿಸಿದ ಆರೋಪದ ಮೇಲೆ ಅವರಿಗೆ ಆರು ವರ್ಷಗಳ ಕಾಲ ಶಿಕ್ಷೆ ವಿಧಿಸಲಾಗಿದ್ದು, ಎರಡು ವರ್ಷದಿಂದ ದೇಶದಿಂದ ಹೊರಗೆ ತೆರಳದಂತೆ ನಿಷೇಧ ಹೇರಲಾಗಿದೆ’ ಎಂದು ಅವರ ಪರ ವಕೀಲ ಮೊಸ್ತಫ ನಿಲ್ಲಿ ತಿಳಿಸಿದ್ದಾರೆ.
ರಣಜಿ ಟ್ರೋಫಿ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಮುಂಬೈ ವಿರುದ್ಧ 4 ವಿಕೆಟ್‌ಗಳ ರೋಚಕ ಜಯ ಸಾಧಿಸಿದ ದೇವದತ್ತ ಪಡಿಕ್ಕಲ್ ನಾಯಕತ್ವದ ಕರ್ನಾಟಕ ತಂಡವು ಸೆಮಿಫೈನಲ್ ಪ್ರವೇಶಿಸಿದೆ.
‘ನಮ್ಮ ಮೆಟ್ರೊ’ ದರ ಏರಿಕೆ ಮಾಡುವ ತೀರ್ಮಾನವನ್ನು ಕೇಂದ್ರ ಸರ್ಕಾರ ನಿಯೋಜಿಸಿದ ‘ಬಿಎಂಆರ್‌ಸಿಎಲ್’ ಅಧ್ಯಕ್ಷರು ಕೈಗೊಳ್ಳುತ್ತಾರೆ. ದರ ಏರಿಕೆ ಮಾಡುವಂತೆ ರಾಜ್ಯ ಸರ್ಕಾರ ಯಾವುದೇ ಶಿಫಾರಸು ಮಾಡಿರಲಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.