
ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
‘ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೆಹಲಿ ಭೇಟಿ ವಿಚಾರ ನನಗೆ ಗೊತ್ತಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಡಿ.ಕೆ.ಶಿವಕುಮಾರ್ ದೆಹಲಿಗೆ ಏತಕ್ಕೆ ಹೋಗಿದ್ದಾರೆ, ಹೈಕಮಾಂಡ್ ಭೇಟಿ ಬಗ್ಗೆ ಗೊತ್ತಿಲ್ಲ’ ಎಂದರು.
ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ದಿನಾಂಕವನ್ನು ಇಂದು (ಶುಕ್ರವಾರ) ಘೋಷಿಸಲಾಗಿದೆ. ಜನವರಿ 19 ರಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದ್ದು, ಜ.20ರಂದು ನೂತನ ಅಧ್ಯಕ್ಷರ ಹೆಸರನ್ನು ಘೋಷಿಸಲಾಗುವುದು ಎಂದು ಪಕ್ಷ ತಿಳಿಸಿದೆ.
ಪೊಂಗಲ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ದಕ್ಷಿಣ ರೈಲ್ವೆಯು ಕೊಟ್ಟಾಯಂ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವೆ ಒಂದು ಟ್ರಿಪ್ ವಿಶೇಷ ರೈಲು ಕಾರ್ಯಾಚರಣೆಯನ್ನು ಪ್ರಕಟಿಸಿದೆ.
ಜಾಲ್ನಾ ಮಹಾನಗರ ಪಾಲಿಕೆ(ಜೆಎಂಸಿ) ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಜಯ ಗಳಿಸಿದ್ದಾರೆ.
ದೇಶದ ಯುವಜನರು ಜ್ಞಾನ ಸಂಪಾದನೆಗೆ ವಿದೇಶಗಳಿಗೆ ತೆರಳಲು ಹಿಂಜರಿಯಬೇಡಿ. ಆದರೆ, ಆ ಕೌಶಲ್ಯಗಳನ್ನು ಉಪಯೋಗಿಸಿಕೊಂಡು ಭಾರತದ ಅಭಿವೃದ್ಧಿ ಮಾಡಿ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ.
‘ಬಿಗ್ ಬಾಸ್’ ಕನ್ನಡ ರಿಯಾಲಿಟಿ ಷೋನಲ್ಲಿ ಅಳಿವಿನಂಚಿನಲ್ಲಿರುವ ರಣಹದ್ದುಗಳ ಬಗ್ಗೆ ಷೋ ನಿರೂಪಕ ಕಿಚ್ಚ ಸುದೀಪ್ ತಪ್ಪಾದ ಮಾಹಿತಿ ನೀಡಿದ್ದಕ್ಕೆ ಸಂಬಂಧಿಸಿದಂತೆ, ಸ್ಪಷ್ಟೀಕರಣ ನೀಡುವಂತೆ ಕಲರ್ಸ್ ಕನ್ನಡ ವಾಹಿನಿಯ ಷೋ ಆಯೋಜಕರಿಗೆ ಅರಣ್ಯ ಇಲಾಖೆ ನೋಟಿಸ್ ಜಾರಿ ಮಾಡಿದೆ.
ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಸೇರಿ ರಾಜ್ಯದ 29 ಮುನ್ಸಿಪಲ್ ಕಾರ್ಪೊರೇಷನ್‌ಗಳಿಗೆ ನಡೆದ ಚುನಾವಣೆಗಳಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸಿದೆ. ಈ ಬಗ್ಗೆ ಸಂತಸ ಹಂಚಿಕೊಂಡಿರುವ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ. ಮೋಹನ್, ರಸಮಲೈ ಅನ್ನು ಉಲ್ಲೇಖಿಸಿ ರಾಜ್ ಠಾಕ್ರೆಗೆ ತಿರುಗೇಟು ನೀಡಿದ್ದಾರೆ.
ಗ್ರೀನ್‌ಲ್ಯಾಂಡ್ ವಶಪಡಿಸಿಕೊಳ್ಳುವ ಯಾವುದೇ ಕ್ರಮವು ಅಮೆರಿಕ ಮತ್ತು ಐರೋಪ್ಯ ಒಕ್ಕೂಟದ ನಡುವಿನ ಆರ್ಥಿಕ ಸಂಬಂಧವನ್ನು ಹಾಳು ಮಾಡುತ್ತದೆ ಎಂದು ಫ್ರಾನ್ಸ್ ಹಣಕಾಸು ಸಚಿವ ರೋಲ್ಯಾಂಡ್ ಲೆಸ್ಕ್ಯೂರ್ ಅವರು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್‌ಗೆ ಎಚ್ಚರಿಕೆ ನೀಡಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ವೇಳೆ ತವರು ಮೈದಾನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜನದಟ್ಟಣೆ ನಿಯಂತ್ರಿಸಲು ಎಐ ಕ್ಯಾಮೆರಾ ಅಳವಡಿಸಲು, ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡವು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ(ಕೆಎಸ್‌ಸಿಎ) ಮನವಿ ಮಾಡಿದೆ.
ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ವೇಳೆ ತವರು ಮೈದಾನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜನದಟ್ಟಣೆ ನಿಯಂತ್ರಿಸಲು ಎಐ ಕ್ಯಾಮೆರಾ ಅಳವಡಿಸಲು, ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡವು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ(ಕೆಎಸ್‌ಸಿಎ) ಮನವಿ ಮಾಡಿದೆ.
ವಿಶ್ವ ಚಾಂಪಿಯನ್ ಡಿ.ಗುಕೇಶ್ ಅವರು 2025ರಲ್ಲಿ ನೆನಪಿನಲ್ಲುಳಿಯುವಂಥ ಉತ್ತಮ ಪ್ರದರ್ಶನ ನೀಡಿರಲಿಲ್ಲ. ಈ ವರ್ಷ ಸುಧಾರಿತ ಪ್ರದರ್ಶನ ನೀಡುವ ಗುರಿಯಲ್ಲಿರುವ ಅವರು ಶನಿವಾರ ಆರಂಭವಾಗುವ ಟಾಟಾ ಸ್ಟೀಲ್ ಮಾಸ್ಟರ್ಸ್ ಟೂರ್ನಿಯ ಮೊದಲ ಸುತ್ತಿನಲ್ಲಿ ವಿಶ್ವಕಪ್ ವಿಜೇತ ಜಾವೋಖಿರ್ ಸಿಂದರೋವ್ (ಉಜ್ಬೇಕಿಸ್ತಾನ) ಅವರನ್ನು ಎದುರಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.