ADVERTISEMENT

2026ರ ಫೆಬ್ರುವರಿ 17: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2026, 14:01 IST
Last Updated 17 ಫೆಬ್ರುವರಿ 2026, 14:01 IST
<div class="paragraphs"><p>ಮುಖ 10 ಸುದ್ದಿಗಳು</p></div>

ಮುಖ 10 ಸುದ್ದಿಗಳು

   

ರಾಷ್ಟ್ರೀಯ, ರಾಜ್ಯ, ವಿದೇಶಕ್ಕೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

ಮೋದಿ–ಮ್ಯಾಕ್ರನ್‌ ದ್ವಿಪಕ್ಷೀಯ ಸಭೆ: ವ್ಯಾಪಾರ, ರಕ್ಷಣಾ ಸಹಕಾರ ಕುರಿತು ಮಾತುಕತೆ

ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುವೆಲ್‌ ಮ್ಯಾಕ್ರನ್ ಅವರೊಂದಿಗೆ ಮುಂಬೈನಲ್ಲಿ ಮಂಗಳವಾರ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ವ್ಯಾಪಾರ, ರಕ್ಷಣಾ ಸಹಕಾರ, ಇಂಧನ, ಅತ್ಯಾಧುನಿಕ ತಂತ್ರಜ್ಞಾನ, ಕೈಗಾರಿಕಾ ವಲಯದ ಸಹಕಾರಕ್ಕೆ ಸಂಬಂಧಿಸಿದಂತೆ ಉಭಯ ದೇಶಗಳ ನಡುವಣ ಸಂಬಂಧ ವೃದ್ಧಿ ಕುರಿತು ಉಭಯ ನಾಯಕರು ಚರ್ಚೆ ನಡೆಸಿದ್ದಾರೆ.

ADVERTISEMENT

ಮಹದೇವಪ್ಪ ನಮ್ಮ ಹೈಕಮಾಂಡ್‌ನ ಭಾಗ, ಸಮಯ ಬಂದಾಗ ಸಿಎಂನೇ ಎಲ್ಲಾ ಹೇಳ್ತಾರೆ: ಡಿಕೆಶಿ

ಸಚಿವ ಎಚ್.ಸಿ ಮಹದೇವಪ್ಪ ಬಹಳ ದೊಡ್ಡವರು. ಈಗ ಅವರೂ ನಮ್ಮ ಹೈಕಮಾಂಡ್ ಭಾಗವಾಗಿದ್ದಾರೆ. ಅವರ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. ಈ ಬಗ್ಗೆ ಪಕ್ಷವೇ ತೀರ್ಮಾನ ಮಾಡಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಕಟ್ಟಾ ಕಾಂಗ್ರೆಸಿಗರು ಬೀದಿ ನಾಯಿಗಳಲ್ಲ.. ನಿಯತ್ತಿನ ನಾಯಿಗಳು: ಡಿಕೆಸು ಎದಿರೇಟು

ನಿಯತ್ತಿನ ಪ್ರಾಣಿ ಎಂದರೆ ನಾಯಿ. ಕಟ್ಟಾ ಕಾಂಗ್ರೆಸಿಗರು ಯಜಮಾನನ ಋಣ ಸ್ಮರಣೆ ಮಾಡಿಕೊಂಡು, ಅದನ್ನು ತೀರಿಸುವ ನಾಯಿಗಳು” ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ತಿಳಿಸಿದರು.

ನಟಿ ಪ್ರತ್ಯೂಷಾ ಸಾವಿನ ಕೇಸ್‌: 23 ವರ್ಷಗಳ ಬಳಿಕ ಬಂತು ತೀರ್ಪು! ನ್ಯಾಯ ಸಿಕ್ಕಿತೆ?

2002 ರಲ್ಲಿ ದಕ್ಷಿಣ ಭಾರತದಲ್ಲಿ ವ್ಯಾಪಕ ಸದ್ದು ಮಾಡಿದ್ದ ನಟಿ ಪ್ರತ್ಯೂಷಾ ಸಾವಿನ ಕೇಸ್‌ ಬಗ್ಗೆ ಇಂದು ಸುಪ್ರೀಂ ಕೋರ್ಟ್‌ ತೀರ್ಪೊಂದನ್ನು ನೀಡಿದೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ 2011 ರಲ್ಲಿ ಆಂಧ್ರಪ್ರದೇಶ ಹೈಕೋರ್ಟ್‌ನಿಂದ 2 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹50 ಸಾವಿರ ದಂಡಕ್ಕೆ ಗುರಿಯಾಗಿದ್ದ ಗುಡಿಪಲ್ಲಿ ಸಿದ್ಧಾರ್ಥ್ ರೆಡ್ಡಿಯ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

T20 ವಿಶ್ವಕಪ್‌ನಿಂದ ಆಸೀಸ್ ಔಟ್: ಸೂಪರ್–8 ತಲುಪಿದ ಜಿಂಬಾಂಬ್ವೆ

ಪಲ್ಲಕೆಲೆಯಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್‌ನ ಸಿ ಗುಂಪಿನ ಐರ್ಲೆಂಡ್ ಹಾಗೂ ಜಿಂಬಾಂಬ್ವೆ ತಂಡಗಳ ನಡುವಿನ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಪಂದ್ಯವು ಒಂದೂ ಎಸೆತವನ್ನೂ ಕಾಣದೆ ರದ್ದಾಗಿದ್ದು, ಉಭಯ ತಂಡಗಳಿಗೆ ತಲಾ ಒಂದೊಂದು ಅಂಕವನ್ನು ಹಂಚಿಕೊಂಡವು.

ಬಾಂಗ್ಲಾದ ನೂತನ ಪ್ರಧಾನಿಯಾಗಿ ತಾರಿಕ್ ಪ್ರಮಾಣ; ಭಾರತದಿಂದ ಓಂ ಬಿರ್ಲಾ ಭಾಗಿ

ಸಾರ್ವತ್ರಿಕ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಐದು ದಿನಗಳ ನಂತರ ಬಾಂಗ್ಲಾದೇಶ ನ್ಯಾಷನಲಿಸ್ಟ್‌ ಪಾರ್ಟಿಯ (ಬಿಎನ್‌ಪಿ) ಅಧ್ಯಕ್ಷ ತಾರಿಕ್ ರೆಹಮಾನ್ ಅವರು ನೂತನ ಪ್ರಧಾನಿಯಾಗಿ ಮಂಗಳವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಜೆಫ್ರಿ ಎಪ್‌ಸ್ಟೈನ್‌ ಪ್ರಕರಣದಲ್ಲಿ ಭಾರತೀಯ ಯುವತಿ; ಸ್ಫೋಟಕ ಮಾಹಿತಿ ಬಹಿರಂಗ

ಜೆಫ್ರಿ ಎಪ್‌ಸ್ಟೈನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ದಾಖಲೆಗಳನ್ನು ನ್ಯಾಯಾಂಗ ಇಲಾಖೆ ಬಿಡುಗಡೆ ಮಾಡಿದೆ. ಇದರಲ್ಲಿ ಭಾರತೀಯ ಯುವತಿಯೊಬ್ಬಳು ಇರುವುದು ಬಹಿರಂಗವಾಗಿದೆ.

ಭಾರತದ ‘ಸಪ್ತ ಸೋದರಿಯರ’ ವಿಷಯ ಪ್ರಸ್ತಾಪಿಸಿದ ಮೊಹಮ್ಮದ್ ಯೂನುಸ್: ಏನಿದು ವಿವಾದ?

ಬಾಂಗ್ಲಾದ ಮಧ್ಯಂತರ ಸರ್ಕಾರದ ನಿರ್ಗಮಿತ ಮುಖ್ಯ ಸಲಹೆಗಾರ ಮೊಹಮ್ಮದ್‌ ಯೂನಸ್ ಅವರು ತಮ್ಮ ದೇಶವನ್ನುದ್ದೇಶಿಸಿ ಮಾಡಿದ ವಿದಾಯ ಭಾಷಣದಲ್ಲಿ ಭಾರತದ ‘ಸಪ್ತ ಸಹೋದರಿಯರು’ ಎಂದು ಕರೆಯಲಾಗುವ ‘ಈಶಾನ್ಯ ರಾಜ್ಯಗಳ’ ಬಗ್ಗೆ ಪ್ರಸ್ತಾಪಿಸುವ ಮೂಲಕ ಮತ್ತೊಮ್ಮೆ ತಮ್ಮ ಭಾರತ ವಿರೋಧಿ ಮನೋಭಾವವನ್ನು ಪ್ರದರ್ಶಿಸಿದ್ದಾರೆ.

ನಟ ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆರೋಗ್ಯ ಏರುಪೇರು: ಆಸ್ಪತ್ರೆಗೆ ದಾಖಲು

ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರ ತಂದೆ, ಹಿರಿಯ ಚಿತ್ರಕಥೆಗಾರ ಸಲೀಂ ಖಾನ್‌ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಬೆಂಗಳೂರು | ರಸ್ತೆ ದಾಟುವ ವೇಳೆ ಬೈಕ್ ಡಿಕ್ಕಿ: ಬ್ಯಾಂಕ್ ಉದ್ಯೋಗಿ ಸಾವು

ರಸ್ತೆ ದಾಟುವ ವೇಳೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬ್ಯಾಂಕ್‌ನ ಮಹಿಳಾ ಉದ್ಯೋಗಿ ಮೃತಪಟ್ಟ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.