
ರಾಜ್ಯ, ದೇಶ, ವಿದೇಶದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ
ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
ನಗರದ ಮಾಣಿಕ್ ಷಾ ಮೈದಾನದಲ್ಲಿ ಗಣರಾಜ್ಯೋತ್ಸವ ಸಂಭ್ರಮ ಮನೆಮಾಡಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಶುಭಾಶಯಗಳನ್ನು ಕೋರಿ ಪರೇಡ್‌ನಲ್ಲಿ ಪಾಲ್ಗೊಂಡು ಗೌರವ ವಂದನೆ ಸ್ವೀಕರಿಸಿದರು. ಪೊಲೀಸ್, ರಕ್ಷಣೆ, ವಿದ್ಯಾರ್ಥಿಗಳು. ಭಾರತ್ ಸ್ಕೌಟ್ಸ್, ಎನ್‌ಸಿಸಿ, ಎನ್‌ಎಸ್ಎಸ್, ರೆಡ್ ಕ್ರಾಸ್ ಸಹಿತ 30 ಕ್ಕೂ ತುಕಡಿಗಳಿಂದ ಗೌರವವನ್ನು ಪಡೆದರು. ಒಟ್ಟು 1326 ಮಂದಿ ಪರೇಡ್ ನಲ್ಲಿ ಹೆಜ್ಜೆ ಹಾಕಿದರು.
ಕೇರಳದ ಮಾಜಿ ಮುಖ್ಯಮಂತ್ರಿ ವಿ.ಎಸ್. ಅಚ್ಯುತಾನಂದನ್, ಹಿಂದುಳಿದ ವರ್ಗಗಳ ನಾಯಕ ವೆಲ್ಲಪಳ್ಳಿ ನಟೇಶನ್, ನಟ ಮಮ್ಮುಟಿ ಸೇರಿದಂತೆ ಒಟ್ಟು 131 ಸಾಧಕರಿಗೆ ಕೇಂದ್ರ ಸರ್ಕಾರವು ಗಣರಾಜ್ಯೋತ್ಸವದ ಮುನ್ನಾದಿನ (ಭಾನುವಾರ) ಪದ್ಮ ಪ್ರಶಸ್ತಿಗಳನ್ನು ಘೋಷಿಸಿದೆ. ಇದರ ಹಿಂದೆ, ವಿವಿಧ ರಾಜ್ಯಗಳಲ್ಲಿ ನಡೆಯಲಿರುವ ಚುನಾವಣೆಗಳನ್ನು ಗೆಲ್ಲುವ ಲೆಕ್ಕಾಚಾರವೂ ಇದೆ ಎನ್ನಲಾಗುತ್ತಿದೆ.
ಯುಎಸ್ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರು ಭಾರತಕ್ಕೆ ಶುಭಾಶಯ ಕೋರಿದ್ದಾರೆ. ರಕ್ಷಣೆ ಹಾಗೂ ಇತರ ರಂಗಗಳಲ್ಲಿ ಭಾರತ ಮತ್ತು ಕ್ವಾಡ್ ರಾಷ್ಟ್ರಗಳ ನಡುವಣ ಸಹಕಾರವನ್ನು ಶ್ಲಾಘಿಸಿದ್ದಾರೆ. ಅಮೆರಿಕ – ಭಾರತ ಸಂಬಂಧವು, ರಕ್ಷಣೆ, ಇಂಧನ, ನಿರ್ಣಾಯಕ ಖನಿಜಗಳ ಸಂಪನ್ಮೂಲ ವಿಚಾರಗಳಲ್ಲಿ ಉಭಯ ದೇಶಗಳ ನಡುವಣ ಸಹಕಾರ ಮತ್ತು ಕ್ವಾಡ್ ಒಕ್ಕೂಟದ ಮೂಲಕ ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ನೈಜ ಫಲಿತಾಂಶಗಳನ್ನು ನೀಡುತ್ತಿದೆ ಎಂದು ಪ್ರತಿಪಾದಿಸಿದ್ದಾರೆ.
ನ್ಯೂಜಿಲೆಂಡ್ ವಿರುದ್ಧ ಇಲ್ಲಿ ಮುಕ್ತಾಯಗೊಂಡ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡ ಸುಲಭವಾಗಿ ಗೆಲ್ಲುವ ಮೂಲಕ 5 ಪಂದ್ಯಗಳ ಸರಣಿಯನ್ನು ಇನ್ನೂ 2 ಪಂದ್ಯಗಳು ಬಾಕಿ ಇರುವಂತೆ ಗೆದ್ದು ಬೀಗಿದೆ. ಈ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಸಿಡಿಸಿದ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ದಾಖಲೆ ಬರೆದರು.
ಛತ್ತೀಸಗಢದ ಬಸ್ತಾರ್ ಪ್ರದೇಶದಲ್ಲಿ ನಕ್ಸಲರಿಂದ ಮುಕ್ತಗೊಂಡಿರುವ 41 ಹಳ್ಳಿಗಳಲ್ಲಿ ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ಮೂಲಕ ಮೊದಲ ಬಾರಿಗೆ ಈ ಗ್ರಾಮಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲಾಗುವುದು ಎಂದು ಬಸ್ತಾರ್ ವಲಯದ ಐಜಿಪಿ ಸುಂದರ್‌ರಾಜ್ ಹೇಳಿದರು.
‘ಪದ್ಮಶ್ರೀ’ ಪ್ರಶಸ್ತಿಗೆ ಭಾಜನರಾದ ನಿವೃತ್ತ ಐಪಿಎಸ್ ಅಧಿಕಾರಿ ಕೆ. ವಿಜಯ್ ಕುಮಾರ್ ಅವರು ಕಾಡುಗಳ್ಳ ವೀರಪ್ಪನ್ ವಿರುದ್ಧದ ಕಾರ್ಯಾಚರಣೆಯಿಂದ ಹೆಸರುವಾಸಿಯಾಗಿದ್ದಾರೆ. 2004ರಲ್ಲಿ ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಪಾಪರಪಟ್ಟಿ ಬಳಿ ತಮಿಳುನಾಡಿನ ಆಗಿನ ಎಸ್‌ಟಿಎಫ್ ಮುಖ್ಯಸ್ಥರಾಗಿದ್ದ ವಿಜಯ್‌ಕುಮಾರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ವೀರಪ್ಪನ್‌ನನ್ನು ಹತ್ಯೆ ಮಾಡಿತ್ತು.
ಹತ್ತು ದಿನಗಳ ಹಿಂದೆ ಸುರಿದ ಮಳೆಯು ಸಂತಸದಲ್ಲಿದ್ದ ಕಾಫಿ ಬೆಳೆಗಾರರನ್ನು ಚಿಂತಿತರನ್ನಾಗಿಸಿದೆ. ನಾಪೋಕ್ಲು ಹೋಬಳಿ ವ್ಯಾಪ್ತಿಯ ತೋಟಗಳಲ್ಲಿ ಕಾಫಿ ಹೂಗಳು ಅರಳಿದ್ದು ತೋಟವೆಲ್ಲ ಘಮಘಮಿಸುತ್ತಿದ್ದರೂ, ಬೆಳೆಗಾರರ ಮುಖದಲ್ಲಿ ಮಂದಹಾಸ ಕಾಣುತ್ತಿಲ್ಲ.
2026ನೇ ಸಾಲಿನ ಪದ್ಮ ಪ್ರಶಸ್ತಿ ಪಟ್ಟಿ ಪ್ರಕಟವಾಗಿದ್ದು, ವಿವಿಧ ಕ್ಷೇತ್ರದ ಹಲವು ಸಾಧಕರಿಗೆ ಗೌರವ ಒಲಿದು ಬಂದಿದೆ. ಆ ಪೈಕಿ 5 ಸಾಧಕರಿಗೆ 'ಪದ್ಮವಿಭೂಷಣ', 13 ಸಾಧಕರಿಗೆ 'ಪದ್ಮಭೂಷಣ' ಹಾಗೂ 113 ಮಂದಿಗೆ ತಮ್ಮ ಕ್ಷೇತ್ರಗಳಲ್ಲಿನ ಗಣನೀಯ ಸಾಧನೆಗಾಗಿ 'ಪದ್ಮಶ್ರಿ' ಪ್ರಶಸ್ತಿ ಲಭಿಸಿದೆ. ಸಿನಿಮಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ಪ್ರಮುಖರಿಗೆ ಪ್ರಶಸ್ತಿ ಒಲಿದಿದೆ.
ನಗರದ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಮೈದಾನದಲ್ಲಿ ಸೋಮವಾರ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಸೇರಿ ಗಣ್ಯರಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಿದ್ದವಾಗುವ ಲಘು ಉಪಾಹಾರ ನೀಡಲಾಗುತ್ತದೆ.
ಸೌರ ವಿದ್ಯುತ್ ಗುತ್ತಿಗೆಯ ಲಂಚ ಪ್ರಕರಣದಲ್ಲಿ ಅದಾನಿ ಸಮೂಹದ ಗೌತಮ್ ಅದಾನಿ ವಿರುದ್ಧ ಅಮೆರಿಕದ ಸೆಕ್ಯುರಿಟೀಸ್ ಎಕ್ಸ್‌ಚೇಂಜ್ ಕಮಿಷನ್ ಕ್ರಮಕ್ಕೆ ಮುಂದಾಗಿರುವುದರಿಂದ ಶುಕ್ರವಾರದ ವಹಿವಾಟಿನಲ್ಲಿ ಅದಾನಿ ಸಮೂಹದ ಕಂಪನಿಗಳ ಷೇರಿನ ಮೌಲ್ಯ ಶೇ 14ರವರೆಗೆ ಇಳಿಕೆ ಕಂಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.