
ಮುಖ 10 ಸುದ್ದಿಗಳು
ಶುದ್ಧ ನೀರು ಪೂರೈಕೆ ಏರುಪೇರು: 2,911 ಘಟಕ ಸ್ಥಗಿತ, ‘ಮೊಬೈಲ್ ಬಿಡಿ–ಪುಸ್ತಕ ಹಿಡಿ’ ಅಭಿಯಾನ ಸೇರಿದಂತೆ ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯಕ್ಕೆ ಸಂಬಂಧಪಟ್ಟಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...
ಬೆಂಗಳೂರು: ನಗರ ಮತ್ತು ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಸರ್ಕಾರ ಸ್ಥಾಪಿಸಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ನಿರ್ವಹಣೆ ಇಲ್ಲದೆ ಸೊರಗುತ್ತಿವೆ.
ಬೆಂಗಳೂರು: ಮೊಬೈಲ್ ಗೀಳಿನಿಂದ ಮಕ್ಕಳನ್ನು ಹೊರತರಲು ಶಾಲಾ ಶಿಕ್ಷಣ ಇಲಾಖೆ ‘ಮೊಬೈಲ್ ಬಿಡಿ–ಪುಸ್ತಕ ಹಿಡಿ’ ಅಭಿಯಾನ ಆರಂಭಿಸಿದೆ.
ನವದೆಹಲಿ: ಬೆಂಗಳೂರು–ಮೈಸೂರು ಇನ್ಫಾಸ್ಟ್ರಕ್ಚರ್ ಕಾರಿಡಾರ್ (ಬಿಎಂಐಸಿ) ಯೋಜನೆಯನ್ನು ಮರು ಪರಿಶೀಲಿಸುವಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ನವದೆಹಲಿ: ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣಕ್ಕೆ ವನ್ಯಜೀವಿ ಅನುಮೋದನೆ ಪಡೆಯಲು ಕರ್ನಾಟಕ ಸರ್ಕಾರವು ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯಕ್ಕೆ ಪ್ರತ್ಯೇಕ ಪ್ರಸ್ತಾವ ಸಲ್ಲಿಸಿದೆ.
ಕಾರವಾರ: ಇಲ್ಲಿನ ಕೋಡಿಬಾಗದ ಸಂತೋಷಿಮಾತಾ ದೇವಸ್ಥಾನದ ಪಕ್ಕದ ಕಾಳಿ ನದಿಯಲ್ಲಿ ಕಾಂಡ್ಲಾ ಸಸಿಗಳ ನಡುವೆ ಸಿಲುಕಿದ್ದ ಸುಮಾರು 130 ಕೆಜಿ ತೂಕದ ಹಸಿರು ಕಡಲಾಮೆಯನ್ನು (ಗ್ರೀನ್ ಸೀ ಟರ್ಟಲ್) ಗುರುವಾರ ರಕ್ಷಿಸಲಾಯಿತು.
ರೇಣುಕಾಸ್ವಾಮಿ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 11ನೇ ಆರೋಪಿ ನಾಗರಾಜು ಅವರಿಗೆ 57ನೇ ಸಿಸಿಎಚ್ ನ್ಯಾಯಾಲಯ ಗುರುವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಬೆಂಗಳೂರು: ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ಮಾರ್ಗಸೂಚಿಗೆ ಅನುಗುಣವಾಗಿ ಬೆಂಗಳೂರು ವಿಶ್ವವಿದ್ಯಾಲಯ ಪಿಎಚ್.ಡಿ ಪ್ರವೇಶ ಪ್ರಕ್ರಿಯೆಯನ್ನು ಆರಂಭಿಸಿದ್ದು, ಒಟ್ಟು 36 ವಿಭಾಗಗಳಲ್ಲಿ 384 ಮಂದಿಗೆ ಪ್ರವೇಶ ಪಡೆಯಲು ಅವಕಾಶ ಸಿಗಲಿದೆ.
ವಾಷಿಂಗ್ಟನ್: ಯುದ್ಧಪೀಡಿತ ಗಾಜಾದಲ್ಲಿನ ಪರಿಹಾರ ಕಾರ್ಯಾಚರಣೆಗಳಿಗಾಗಿ ಶಾಂತಿ ಮಂಡಳಿಯ ಒಂಬತ್ತು ಸದಸ್ಯ ರಾಷ್ಟ್ರಗಳು 7 ಬಿಲಿಯನ್ ಡಾಲರ್ (₹63 ಸಾವಿರ ಕೋಟಿ) ನೀಡಲು ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಹೇಳಿದ್ದಾರೆ.
ವಾಷಿಂಗ್ಟನ್: ತನ್ನ ಅಣ್ವಸ್ತ್ರ ಕಾರ್ಯಕ್ರಮಕ್ಕೆ ಸಂಬಂಧಿಸಿ ಇರಾನ್ ಕೂಡಲೇ ಸೂಕ್ತ ಒಪ್ಪಂದಕ್ಕೆ ಬರಬೇಕು. ತಪ್ಪಿದಲ್ಲಿ ಭಾಂಬ್ ದಾಳಿಯೂ ಸೇರಿ ಘೋರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಎಚ್ಚರಿಸಿದ್ದಾರೆ.
ಬೆಂಗಳೂರು: ಹುಬ್ಬಳ್ಳಿಯ ರಾಜನಗರದಲ್ಲಿರುವ ಕೆಎಸ್‌ಸಿಎ ಮೈದಾನದಲ್ಲಿ ಇದೇ 24ರಿಂದ 28ರವರೆಗೆ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯ ನಡೆಯಲಿದೆ. ಕರ್ನಾಟಕ ಮತ್ತು ಜಮ್ಮು–ಕಾಶ್ಮೀರ ತಂಡಗಳು ಮುಖಾಮುಖಿಯಾಗಲಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.