ADVERTISEMENT

22 ಫೆಬ್ರುವರಿ 2026: ಈ ದಿನದ ಟಾಪ್ 10 ಸುದ್ದಿಗಳು ಇಲ್ಲಿವೆ...

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಫೆಬ್ರುವರಿ 2026, 13:19 IST
Last Updated 22 ಫೆಬ್ರುವರಿ 2026, 13:19 IST
<div class="paragraphs"><p>ಮುಖ 10 ಸುದ್ದಿಗಳು</p></div>

ಮುಖ 10 ಸುದ್ದಿಗಳು

   

ಉತ್ತರ ಕನ್ನಡ ಸೇರಿ ಎಲ್ಲ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ:ಸಿಎಂ ಭರವಸೆ, ಬಂಡೀಪುರ: ಸಫಾರಿ ಮರು ಆರಂಭ ಸೇರಿದಂತೆ ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯಕ್ಕೆ ಸಂಬಂಧಪಟ್ಟಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...

ಪ್ರಧಾನಿಯಿಂದ ಗುಣಗಾನ: ನಂಜನಗೂಡು ರಸಬಾಳೆ, ಮೈಸೂರು ವೀಳ್ಯದೆಲೆ ರಫ್ತಿಗೆ ಉತ್ತೇಜನ

ಜಿಲ್ಲೆಯ ಹೆಗ್ಗುರುತುಗಳಾದ ನಂಜನಗೂಡು ರಸಬಾಳೆ ಹಾಗೂ ಮೈಸೂರು ವೀಳ್ಯದೆಲೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ನಡೆದ ‘ಮನ್‌ ಕಿ ಬಾತ್‌’ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿದ್ದಾರೆ.

ADVERTISEMENT

ಉತ್ತರ ಕನ್ನಡ ಸೇರಿ ಎಲ್ಲ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ:ಸಿಎಂ ಭರವಸೆ

'ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಬಜೆಟ್‌ನಲ್ಲಿ ಅನುದಾನ ಘೋಷಣೆ ಮಾಡಲಾಗುವುದು. ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲಾಗುವುದು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಬಂಡೀಪುರ: ಸಫಾರಿ ಮರು ಆರಂಭ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಭಾನುವಾರ ಸಫಾರಿ ಮರು ಆರಂಭವಾಯಿತು. ಮಧ್ಯಾಹ್ನ 3 ಗಂಟೆಗೆ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದಿಂದ ನಾಲ್ಕು ಮಿನಿ ಬಸ್‌ಗಳು ಹಾಗೂ ಮೂರು ಜಿಪ್ಸಿ ವಾಹನಗಳು ಪ್ರವಾಸಿಗರನ್ನು ಸಫಾರಿಗೆ ಕರೆದೊಯ್ದವು.

ಜೂನ್ ಒಳಗೆ ಜಿ.ಪಂ, ತಾ.ಪಂ ಚುನಾವಣೆ:ಸಿ.ಎಂ ಸಿದ್ದರಾಮಯ್ಯ

ಅಂಕೋಲಾ: ಜೂನ್ ಒಳಗೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕುಮಾರಸ್ವಾಮಿ, ದೇವೇಗೌಡರು ಒಕ್ಕಲಿಗ ನಾಯಕರನ್ನು ಬೆಳೆಸಲಿಲ್ಲ, ಮುಗಿಸಿದರು: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ, ಅಧಿಕಾರ ಹಸ್ತಾಂತರದ ಚರ್ಚೆಗಳು ಮುನ್ನಲೆಯಲ್ಲಿ ಇರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಮಾಡಿದ್ದ ಸರಣಿ ‘ಪೋಸ್ಟ್‌’ಗಳು ರಾಜಕೀಯ ವಲಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

ಶಾಸಕರು ಬಾಯಿ ಮುಚ್ಚಿಕೊಂಡರೆ ನನಗೆ ಒಳ್ಳೆಯದು: ಡಿ.ಕೆ.ಶಿವಕುಮಾರ್

ಕಾರವಾರ: 'ಶಾಸಕರಾದ ಇಕ್ಬಾಲ್ ಹುಸೇನ್ ಸೇರಿ ಕೆಲವರು ಬಾಯಿ ಮುಚ್ಚಿಕೊಂಡಿದ್ದರೆ ನನಗೆ ಒಳ್ಳೆಯದಾಗುತ್ತದೆ' ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ದೇಶದ ಅತಿ ವೇಗದ ಮೀರಠ್ ಮೆಟ್ರೊ ಹಾಗೂ ನಮೋ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಮೀರಠ್: ದೇಶದ ಅತಿ ವೇಗದ ಮೀರಠ್ ಮೆಟ್ರೊ ಹಾಗೂ ನಮೋ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಇಂದು (ಭಾನುವಾರ) ಚಾಲನೆ ನೀಡಿದ್ದಾರೆ. ಶತಾಬ್ದಿ ನಗರ ನಿಲ್ದಾಣದಿಂದ ಮೀರಠ್ ದಕ್ಷಿಣ ನಿಲ್ದಾಣದವರೆಗೆ ಪ್ರಧಾನಿ ಮೋದಿ ಸಂಚರಿಸಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್‌ಕೌಂಟರ್: ಇಬ್ಬರು ಭಯೋತ್ಪಾದಕರ ಹತ್ಯೆ

ಉಗ್ರರು

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್ತ್‌ವಾರ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

'ಅಬ್ ಕಿ ಬಾರ್ ಟ್ರಂಪ್ ಸೇ ಹಾರ್': ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಜೈರಾಮ್ ರಮೇಶ್ 

ನವದೆಹಲಿ: ಅಮೆರಿಕದೊಂದಿಗಿನ ಮಧ್ಯಂತರ ವ್ಯಾಪಾರ ಒಪ್ಪಂದದ ಕುರಿತಾಗಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಇದು 'ಅಬ್ ಕಿ ಬಾರ್ ಟ್ರಂಪ್ ಸೇ ಹಾರ್' ಎಂಬುದನ್ನು ತೋರಿಸುತ್ತದೆ ಎಂದು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಟೀಕಿಸಿದ್ದಾರೆ.

Women's Asia Cup Rising Stars: ಸತತ ಎರಡನೇ ಬಾರಿ ಭಾರತ ‘ಎ’ ಚಾಂಪಿಯನ್‌

ಬ್ಯಾಂಕಾಕ್: ಮಹಿಳಾ ರೈಸಿಂಗ್ ಸ್ಟಾರ್ಸ್‌ ಟಿ20 ಏಷ್ಯಾಕಪ್‌ ಟೂರ್ನಿಯ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ಎ ವಿರುದ್ಧ 46 ರನ್‌ಗಳ ಗೆಲುವು ಸಾಧಿಸಿದ ಭಾರತ ‘ಎ’ತಂಡವು, ಎರಡನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.